ಬೆಳ್ತಂಗಡಿ, ಜುಲೈ 05, 2025 (ಕರಾವಳಿ ಟೈಮ್ಸ್) : ಅಂಗಡಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಶೇಖರಣೆ ಮಾಡಿದ ಪ್ರಕರಣ ಬೇಧಿಸಿದ ಬೆಳ್ತಂಗಡಿ ಪೊಲೀಸರು ಇಬ್ಬರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಮಲವಂತಿಗೆ ನಿವಾಸಿ ಅಬ್ದುಲ್ ರಜಾಕ್ (28) ಎಂಬಾತ ತನ್ನ ಅಂಗಡಿಯಲ್ಲಿ ಯಾವುದೇ ಪರವಾನಿಗೆ ಹೊಂದದೆ ಅಕ್ರಮವಾಗಿ ಜಾನುವಾರು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಶೇಖರಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜುಲೈ 2 ರಂದು ಬೆಳ್ತಂಗಡಿ ಪಿಎಸ್ಸೈ ಎಲ್ಲಪ್ಪ ಎಚ್ ಮಾದರ ಅವರ ನೇತೃತ್ವದ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ 47 ಕೆಜಿ ದನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯ ಪ್ರಿಡ್ಜ್ ನೊಳಗೆ ಇರಿಸಿರುವುದು ಕಂಡು ಬಂದಿದೆ. ಸದ್ರಿ ಮಾಂಸವನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಸ್ವಾಧೀನಪಡಿಸಿ, ಆರೋಪಿತರಾದ ಅಬ್ದುಲ್ ರಜಾಕ್ ಹಾಗೂ ಅಂಗಡಿಯಲ್ಲಿದ್ದ ಮತ್ತೋರ್ವ ಆರೋಪಿತ ಅಬ್ದುಲ್ ರವೂಪ್ (20) ಎಂಬವರ ವಿರುದ್ಧ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 51/2025, ಕಲಂ 4, 12 ಕರ್ನಾಟಕ ಗೋವಧೆ ಪ್ರತಿಬಂಧÀಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಾಗಿದೆ.
ವಧೆ ಮಾಡಲಾದ ಜಾನುವಾರಿನ ಬಗ್ಗೆ ವಿಚಾರಿಸಲಾಗಿ, ಸಹೋದರರಾದ ಆರೋಪಿಗಳು ಅವರ ಮನೆಯಲ್ಲಿ ಸಾಕಿದ್ದ ಜಾನುವಾರನ್ನು ವಧೆ ಮಾಡಿ, ಮಾಂಸ ಮಾರಾಟಕ್ಕೆ ಯತ್ನಿಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment