ಪುತ್ತೂರು, ಜುಲೈ 02, 2025 (ಕರಾವಳಿ ಟೈಮ್ಸ್) : ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣಾಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಸಾಮೆತ್ತಡ್ಕ ಎಂಬಲ್ಲಿ ಮಂಗಳವಾರ ನಡೆದಿದೆ.
ಬಂಧಿತ ಆರೋಪಿಗಳನ್ನು ವಿಲ್ಫ್ರೆಡ್ ಡಿಸೋಜ (58) ಹಾಗೂ ಲಕ್ಷ್ಮೀಶ (39) ಎಂದು ಹೆಸರಿಸಲಾಗಿದೆ. ಪುತ್ತೂರು ಕಸ್ಬಾ ಗ್ರಾಮದ ಸಾಮೆತ್ತಡ್ಕ ಎಂಬಲ್ಲಿ ಆರೋಪಿ ವಿಲ್ಫ್ರೆಡ್ ಎಂಬಾತನ ವಾಸ್ತವ್ಯದ ಮನೆಯ ಸಮೀಪದ ಕಟ್ಟಡದಲ್ಲಿ, ಆತನು ಅಕ್ರಮವಾಗಿ ವೇಶ್ಯಾವಾಟಿಕೆ ಕೃತ್ಯ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸುನೀಲ್ ಕುಮಾರ್ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment