ಮಂಗಳೂರು, ಜುಲೈ 16, 2025 (ಕರಾವಳಿ ಟೈಮ್ಸ್) : ಸೈಬರ್ ಕ್ರೈಂ ಪೊಲೀಸ್ ಅಧಿಕಾರಿ ಎಂದು ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ಮುಂಡಾಮೋಚಿದ ಆರೋಪಿಯನ್ನು ಮಂಗಳೂರು ಸೆನ್ ಕ್ರೈಂ ಪೊಲೀಸರು ಬಲೆಗೆ ಕೆಡವಿದ್ದಾರೆ.
ಬಂಧಿತ ಆರೋಪಿಯನ್ನು ತುಮಕೂರು ಜಿಲ್ಲೆಯ, ಕೋತಿತೋಪು ಚಾಮುಂಡೇಶ್ವರಿ ದೇವಸ್ಥಾನದ ಬಳಿಯ ಬಾರ್ ಲೈನ್ ರಸ್ತೆ ನಿವಾಸಿ ದಿವಂಗತ ತಿಮ್ಮರಾಜು ಎಂಬವರ ಪುತ್ರ ಅರುಣ್ ಟಿ (27) ಎಂದು ಹೆಸರಿಸಲಾಗಿದೆ.
ಈತನ ವಿರುದ್ದ ಮಂಗಳವಾರ (ಜುಲೈ 15) ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ 37/2025 ಕಲಂ 66(ಸಿ) 66(ಡಿ) ಐಟಿ ಕಾಯ್ದೆ ಹಾಗೂ ಕಲಂ 112, 308(2), 318(4) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿತ್ತು.
ಆರೋಪಿಯು ಪೇಸ್ ಬುಕ್ ಖಾತೆ, ಕನ್ನಡ ಮಾಡೆಲ್ಸ್ , ಟ್ರೋಲ್ ಮಾಸ್ಟರ್, ಟ್ರೋಲ್ ಬಸ್ಯಾ ಇತ್ಯಾದಿ ಪೇಜ್ ಗಳಲ್ಲಿ ಕಮೆಂಟ್ಸ್ ಹಾಕಿರುವ ವ್ಯಕ್ತಿಗಳಿಗೆ ಕರೆಮಾಡಿ ಸೈಬರ್ ಕ್ರೈಂ ಪೊಲೀಸ್ ಬೆಂಗಳೂರು ಸುಶೀಲ್ ಕುಮಾರ ಎಂದು ತನ್ನನ್ನು ಪರಿಚಯಿಸಿಕೊಂಡು ನಿಮ್ಮ ಮೇಲೆ ದೂರುಗಳು ಬಂದಿದೆ. ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ. ಜನರನ್ನು ಹೆದರಿಸಿ ಒಟ್ಟು 1.23 ಲಕ್ಷ ರೂಪಾಯಿ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿರುತ್ತಾನೆ.
ಆರೋಪಿತನ ಮೇಲೆ ಸೈಬರ್ ಪೊರ್ಟಲ್ ನಲ್ಲಿ ಒಟ್ಟು 11 ದೂರುಗಳು ದಾಖಲಾಗಿರುತ್ತವೆ. ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿ ಆರೋಪಿತನನ್ನು ತುಮಕೂರಿನಲ್ಲಿ ಬಂಧಿಸಿ ಬುಧವಾರ ನ್ಯಾಯಾಲಯಕ್ಕೆ ಹಾಜರಿಪಡಿಸಲಾಗಿದ್ದು, ಆತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
0 comments:
Post a Comment