ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ ಹೊರತಾಗಿಯೂ ವಾಟ್ಸಪ್ ಮೂಲಕ ಪ್ರಚಾರ : ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ ಹೊರತಾಗಿಯೂ ವಾಟ್ಸಪ್ ಮೂಲಕ ಪ್ರಚಾರ : ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

3 July 2025

ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ ಹೊರತಾಗಿಯೂ ವಾಟ್ಸಪ್ ಮೂಲಕ ಪ್ರಚಾರ : ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ಜುಲೈ 03, 2025 (ಕರಾವಳಿ ಟೈಮ್ಸ್) : ಕೈಕಂಬದಲ್ಲಿ ಎಸ್ ಡಿ ಪಿ ಐ ಪಕ್ಷ ಶುಕ್ರವಾರ ಬಿ ಸಿ ರೋಡಿನ ಕೈಕಂಬದಲ್ಲಿ ಜುಲೈ 4 ರಂದು ಶುಕ್ರವಾರ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿ ಪಕ್ಷದ ಪ್ರಮುಖರಿಗೆ ಹಿಂಬರಹ ನೀಡಿರುವ ಹೊರತಾಗಿಯೂ ವಾಟ್ಸಪ್ ಗ್ರೂಪುಗಳಲ್ಲಿ ಶುಕ್ರವಾರ ಸಂಜೆ ಪ್ರತಿಟನೆ ಇರುವ ಬಗ್ಗೆ ಪೋಸ್ಟರ್ ಹಂಚಿಕೊಂಡು ದುಷ್ಪ್ರೇರಣೆ ನೀಡಿದ ಆರೋಪದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. 

ಜುಲೈ 1 ರಂದು ಸಂಜೆ ಅಶ್ರಫ್ ತಲಪಾಡಿ (41) ಹಾಗೂ ಇನ್ನಿಬ್ಬರು ಬಂಟ್ವಾಳ ನಗರ ಪೆÇಲೀಸ್ ಠಾಣೆಗೆ ಆಗಮಿಸಿ, ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಅಶ್ರಫ್ ವಯನಾಡ್ ಎಂಬಾತನ ಗುಂಪು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಜುಲೈ 4 ರಂದು ಅಪರಾಹ್ನ, ಬಿ ಸಿ ರೋಡು ಸಮೀಪದ ಕೈಕಂಬ ಜಂಕ್ಷನ್ನಿನಲ್ಲಿ ನಡೆಸಲು ಉದ್ದೇಶಿಸಿರುವ ಪ್ರತಿಭಟನಾ ಸಭೆಗೆ ಧ್ವನಿವರ್ಧಕ ಬಳಸಲು ಅನುಮತಿ ಮತ್ತು ಸೂಕ್ತ ಬಂದೋಬಸ್ತ್ ಒದಗಿಸುವಂತೆ ಮನವಿ ಪತ್ರ ನೀಡಿದ್ದರು. 

ಇವರ ಮನವಿ ಸ್ವೀಕರಿಸಿದ ಬಂಟ್ವಾಳ ನಗರ ಠಾಣಾ ಪೆÇಲೀಸ್ ಇನ್ಸ್ ಪೆಕ್ಟರ್ ಅವರು, ಮನವಿದಾರರಿಗೆ ಪ್ರಕರಣಗಳಲ್ಲಿ ಸರಕಾರ ಪರಿಹಾರ ಮೊತ್ತವನ್ನು ನೀಡದಿರುವ ಬಗ್ಗೆ ಮೃತರ ಕುಟುಂಬಸ್ಥರು ಅಥವಾ ಯಾರಾದರೂ ಮನವಿ ನೀಡಿರುತ್ತಾರೆಯೇ ಎಂದು ಕೇಳಿದಾಗ, ಯಾರು ನೀಡಿರುವುದಿಲ್ಲವೆಂಬುದಾಗಿ ಮತ್ತು ಷಡ್ಯಂತ್ರ ರೂಪಿಸಿದ ಆರೋಪಿತರ ಬಗ್ಗೆ ಮಾಹಿತಿ ಅಥವಾ ಸಾಕ್ಷಿಗಳು ಇದೆಯೇ ಎಂದು ಪ್ರಶ್ನಿಸಿದಾಗ ನಿರ್ದಿಷ್ಟ ಖಚಿತ ಮಾಹಿತಿ ಇರುವುದಿಲ್ಲ ಎಂಬುದಾಗಿ ಮನವಿದಾರರು ತಿಳಿಸಿದ ಮೇರೆಗೆ ಸದ್ರಿ ಘಟನೆಗಳಿಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಹಾಗೂ ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿ ತನಿಖೆಯಲ್ಲಿರುವುದರಿಂದ ಆರೋಪಿತರು ಮತ್ತು ಸಾಕ್ಷ್ಯಗಳ ಬಗ್ಗೆ ಮಾಹಿತಿ ಇದ್ದಲ್ಲಿ ಸಂಬಂಧಪಟ್ಟ ತನಿಖಾಧಿಕಾರಿಗೆ ಹಾಗೂ ಇತರೆ ಬೇಡಿಕೆಗಳಿದ್ದಲ್ಲಿ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಕಾನೂನಾತ್ಮಕವಾಗಿ ಸೂಕ್ತ ರೀತಿಯಲ್ಲಿ ಸಂಪರ್ಕಿಸುವಂತೆ ಸೂಚಿಸಿ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಕಳೆದ ಸುಮಾರು ವರ್ಷಗಳಿಂದ ನಡೆದಿರುವ ಕೋಮು ಸಂಬಂಧಿತ ಹತ್ಯೆ ಮತ್ತು ಸಂಘರ್ಷಗಳನ್ನು ಅವಲೋಕಿಸಿಕೊಂಡು ಬಂಟ್ವಾಳದಲ್ಲಿ ಕಾನೂನು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೂಕ್ತ ಕಾನೂನು ತಿಳುವಳಿಕೆ ನೀಡಿ ಅನುಮತಿ ನಿರಾಕರಿಸಿ ಹಿಂಬರಹವನ್ನು ನೀಡಿದ್ದರು. 

ಆದರೂ “ಬ್ರೇಕಿಂಗ್ ನ್ಯೂಸ್ ಮೈಕಾಲ’’ ಎಂಬ ವಾಟ್ಸಾಪ್  ಗ್ರೂಪಿನಲ್ಲಿ “ನ್ಯಾಯ ಮರೀಚಿಕೆ, ಹುಸಿಯಾದ ಭರವಸೆ, ಅಬ್ದುಲ್ ರಹಿಮಾನ್ ಮತ್ತು ವಯನಾಡ್ ಅಶ್ರಫ್ ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸದ ಸರ್ಕಾರದ ನಡೆಯನ್ನು ವಿರೋಧಿಸಿ ಪ್ರತಿಭಟನಾ ಸಭೆ, ದಿನಾಂಕ :  04.07.2025 ಶುಕ್ರವಾರ, ಸಂಜೆ: 4.00 ಗಂಟೆ, ಸ್ಥಳ : ಕೈಕಂಬ ಜಂಕ್ಷನ್ (ಬಿ ಸಿ ರೋಡು), ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆ” ಎಂಬುದಾಗಿ ಪೆÇೀಸ್ಟ್ ಹರಿದಾಡುತ್ತಿರುವುದು ಕಂಡುಬಂದಿದೆ. 

ಮನವಿದಾರರಿಗೆ ಸೂಕ್ತ ಕಾನೂನು ತಿಳುವಳಿಕೆ ನೀಡಿ ಹಿಂಬರಹವನ್ನು ನೀಡಲಾಗಿದ್ದರೂ ಕೂಡಾ ಅಶ್ರಫ್ ತಲಪಾಡಿ, ಜಿಲ್ಲಾ ಕಾರ್ಯದರ್ಶಿ, ಎಸ್ ಡಿ ಪಿ ಐ, ಹಾಗೂ ಇತರರು ಜುಲೈ 4 ರಂದು ಶುಕ್ರವಾರ ಸಂಜೆ 4 ಗಂಟೆಗೆ ಬಿ ಸಿ ರೋಡು ಸಮೀಪದ ಕೈಕಂಬ ಜಂಕ್ಷನ್ನಿನಲ್ಲಿ ಪ್ರತಿಭಟನಾ ಸಭೆ ಎಂಬುದಾಗಿ ಬರಹ ಇರುವ ಪೆÇೀಸ್ಟರನ್ನು ಸಾರ್ವಜನಿಕರಿಗೆ ವಾಟ್ಸಾಪ್ ಮೂಲಕ ಪ್ರಸಾರ ಮಾಡಿ, ಜುಲೈ 4 ರ ಸಂಜೆ ಬಿ ಸಿ ರೋಡು-ಕೈಕಂಬ ಜಂಕ್ಷನ್ನಿನಲ್ಲಿ ಅಕ್ರಮ ಕೂಟ ಸೇರಿ ಅಪರಾಧ ಎಸಗಲು ವಾಟ್ಸಾಪ್ ಸಂದೇಶದ ಮೂಲಕ ದುಷ್ಪ್ರೇರಣೆ ನೀಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ  ಕಲಂ 57 ಜೊತೆಗೆ ಕಲಂ 189(2) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ ಹೊರತಾಗಿಯೂ ವಾಟ್ಸಪ್ ಮೂಲಕ ಪ್ರಚಾರ : ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top