ಧರ್ಮಸ್ಥಳ, ಜುಲೈ 12, 2025 (ಕರಾವಳಿ ಟೈಮ್ಸ್) : ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಇರುವ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನ ಕಳವಾಗಿರುವ ಘಟನೆ ಜುಲೈ 10 ರಂದು ಸಂಜೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ನೆಡ್ಲೆ ಗ್ರಾಮದ ಮಜಲುಮಾರು ನಿವಾಸಿ ಸಂಜೀವ ಗೌಡ ಅವರ ಪುತ್ರಿ ಆಶಾ ಎಂ ಅವರು ಪೊಲೀಸರಿಗೆ ದೂರು ನೀಡಿದ್ದು, ಇವರು ಉಜಿರೆ ಪ್ರಕಾಶ್ ಇಲೆಕ್ಟ್ರಾನಿಕ್ಸ್ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಜುಲೈ 10 ರಂದು ತನ್ನ ಹೋಂಡಾ ಕಂಪೆನಿಯ ಡಿಯೋ ದ್ವಿಚಕ್ರ ವಾಹನದಲ್ಲಿ ಬೆಳಿಗ್ಗೆ 8.20ಕ್ಕೆ ಮನೆಯಿಂದ ಹೊರಟು 8.40ಕ್ಕೆ ಧರ್ಮಸ್ಥಳ ತಲುಪಿ ಧರ್ಮಸ್ಥಳದ ಮುಖ್ಯ ದ್ವಾರದ ಬಳಿಯಿರುವ ಪಾರ್ಕಿಂಗಿನಲ್ಲಿ ಎಂದಿನಂತೆ ತನ್ನ ದ್ವಿಚಕ್ರ ವಾಹನವನ್ನು ಪಾರ್ಕ್ ಮಾಡಿ ಕೆಲಸಕ್ಕೆ ಹೋಗಿದ್ದಾರೆ. ಸಂಜೆ ಕೆಲಸ ಮುಗಿಸಿ ಬಂದು ತಾನು ಪಾರ್ಕ್ ಮಾಡಿದ ದ್ವಿಚಕ್ರ ವಾಹನವನ್ನು ನೋಡಲಾಗಿ ಅಲ್ಲಿ ದ್ವಿಚಕ್ರ ವಾಹನ ಪಾರ್ಕ್ ಮಾಡಿದ ಸ್ಥಳದಲ್ಲಿ ಇಲ್ಲದೆ ಕಾಣೆಯಾಗಿದೆ. ಅಕ್ಕ ಪಕ್ಕದಲ್ಲಿ ಹುಡುಕಾಡಿದರೂ ಪತ್ತೆಯಾಗದೇ ಇರುವ ಹಿನ್ನಲೆಯಲ್ಲಿ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಕಳವಾಗಿರುವ ದ್ವಿಚಕ್ರ ವಾಹನದ ಮೌಲ್ಯ ಸುಮಾರು 25 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ.
0 comments:
Post a Comment