ಮನಪಾ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ ಅಲಿಯಾಸ್ ಮುನ್ನ ಬಂಧನ - Karavali Times ಮನಪಾ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ ಅಲಿಯಾಸ್ ಮುನ್ನ ಬಂಧನ - Karavali Times

728x90

30 July 2025

ಮನಪಾ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ ಅಲಿಯಾಸ್ ಮುನ್ನ ಬಂಧನ

ಮಂಗಳೂರು, ಜುಲೈ 30, 2025 (ಕರಾವಳಿ ಟೈಮ್ಸ್) : ಕಂಕನಾಡಿ ನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ  “ಶ್ರೀ ರಾಜ ದುರ್ಗಾ ಫರ್ನಿಚರ್ ವರ್ಕ್ಸ್” ಎಂಬ ಉದ್ದಿಮೆ ಹೊಂದಿರುವ ಬಾಲಕೃಷ್ಣ ಸುವರ್ಣ ಎಂಬವರು  ನ್ಯಾಯಾಲಯದ ಪ್ರಕರಣದಲ್ಲಿ ವ್ಯವಹರಿಸಲು  ದಾಖಲಾತಿಗಳನ್ನು ಪಡೆದುಕೊಳ್ಳಲು  ಮಂಗಳೂರು ಮಹಾನಗರ ಪಾಲಿಕೆಗೆ ಭೇಟಿ ನೀಡಿದ್ದು, ಆ ಸಂದರ್ಭ ಅವರ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಅನೂರ್ಜಿತಗೊಂಡಿರುವುದು ತಿಳಿದು ಬಂದಿರುತ್ತದೆ. ಆದರೆ ಬಾಲಕೃಷ್ಣ ಸುವರ್ಣ ಅವರಲ್ಲಿ ಊರ್ಜಿತವಾಗಿರುವ ಉದ್ದಿಮೆ ಪರವಾನಗಿ  ಹಾಗೂ ಆಸ್ತಿ ತೆರಿಗೆ ಇದ್ದು, ಇದನ್ನು ಪರಿಶೀಲಿಸಿದಾಗ ಬಾಲಕೃಷ್ಣ ಸುವರ್ಣ ಅವರಿಂದ ಪೃಥ್ವಿರಾಜ್ ಶೆಟ್ಟಿ ಅಲಿಯಾಸ್ ಮುನ್ನಾ ಎಂಬಾತನು 27,990/- ರೂಪಾಯಿ ಹಣವನ್ನು ಪಡೆದುಕೊಂಡು ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಗಳನ್ನು ನಕಲಿಯಾಗಿ ಸೃಷ್ಠಿಸಿ ನೀಡಿರುವುದು ತಿಳಿದು ಬಂದಿರುತ್ತದೆ.  ಈ ಹಿನ್ನೆಲೆಯಲ್ಲಿ  ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಕಂಕನಾಡಿ ನಗರ ಪೆÇಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಬಾಲಕೃಷ್ಣ ಸುವರ್ಣ ಅವರು ನಕಲಿ ಉದ್ದಿಮೆ ಪರವಾನಿಗೆಯನ್ನು ಹಾಗೂ ಆಸ್ತಿ ತೆರಿಗೆಯನ್ನು ಸೃಷ್ಠಿಸಿ ವಂಚಿಸಿರುವ ಪೃಥ್ವಿರಾಜ್ ಶೆಟ್ಟಿ ವಿರುದ್ದ ದೂರು ನೀಡಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಅಲ್ಲದೇ  ಪಂಪ್ ವೆಲ್ ನಲ್ಲಿರುವ ಲಕ್ಷ್ಮಿ ಹಾರ್ಡ್ ವೇರ್ ವರ್ಕ್ ಶಾಪ್ ಮಾಲೀಕ ದೇವಾಂಗ  ಕೆ ಪಟೇಲ್ ಅವರು ಕೂಡಾ ಪೃಥ್ವಿರಾಜ್ ಶೆಟ್ಟಿ ಅಲಿಯಾಸ್ ಮುನ್ನ ನಕಲಿ ಉದ್ದಿಮೆ ಪರವಾನಿಗೆಯನ್ನು ಹಾಗೂ  ನಕಲಿ ಆಸ್ತಿ ತೆರಿಗೆಯನ್ನು ಸೃಷ್ಠಿಸಿ ವಂಚಿಸಿರುವ ಬಗ್ಗೆ ಬರ್ಕೆ ಪೆÇಲೀಸ್ ಠಾಣೆಗೆ ದೂರು ನೀಡಿದ್ದು, ಆ ಬಗ್ಗೆಯೂ ಕೇಸು ದಾಖಲಾಗಿರುತ್ತದೆ.

ಪ್ರಕರಣ ದಾಖಲಾದ ಸಮಯ ಆರೋಪಿ, ಮಂಗಳೂರು, ಉಜ್ಜೋಡಿ, ಬೈಕ್ ಕ್ಲಿನಿಕ್ ಹತ್ತಿರದ ನಿವಾಸಿ ಗಣೇಶ್ ಶೆಟ್ಟಿ ಅವರ ಮಗ ಪೃಥ್ವಿರಾಜ್ ಶೆಟ್ಟಿ ಅಲಿಯಾಸ್ ಮುನ್ನ (25) ಎಂಬಾತ ತಲೆಮರೆಸಿಕೊಂಡಿದ್ದು, ಕೇರಳದ ಹಲವು ಕಡೆಗಳಲ್ಲಿ ತಲೆಮರೆಸಿಕೊಂಡು ನಂತರ ಕಿ£್ನಗೋಳಿಗೆ ಬರುತ್ತಿರುವ ಮಾಹಿತಿಯಂತೆ ಜುಲೈ 25ರಂದು ಕಂಕನಾಡಿ ನಗರ ಪೆÇಲೀಸ್ ಠಾಣಾ ಪೆÇಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ಕೂಲಂಕುಷವಾಗಿ ವಿಚಾರಣೆಗೆ ಒಳಪಡಿಸಿದಾಗ, ಆರೋಪಿಯ ತಂದೆ  ಗಣೇಶ್ ಅವರು ದೇವಾಂಗ್ ಕೆ ಪಟೇಲ್ ರವರ ಅಂಗಡಿಯಲ್ಲಿ  ಕಮರ್ಷಿಯಲ್ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದು, ನಂತರ ತನ್ನ ತಂದೆಗೆ ಅನಾರೋಗ್ಯವಾದ ಕಾರಣ 2004 ರಿಂದ ತಾನು ಕೆಲಸವನ್ನು ಮುಂದುವರಿಸಿ, ದೇವಾಂಗ  ಕೆ ಪಟೇಲ್ ಹಾಗೂ ಅವರ ಪರಿಚಯದ ಬಾಲಕೃಷ್ಣ ಅವರಿಗೆ ಸಂಬಂಧಿಸಿದ ಉದ್ದಿಮೆಯ 2025-26ನೇ ಸಾಲಿನ ಪರವಾನಿಗೆಯನ್ನು ನವೀಕರಣ ಮಾಡಲು ಹಾಗೂ ಕಟ್ಟಡಗಳ ಆಸ್ತಿ ತೆರಿಗೆ ಪಾವತಿ ಮಾಡಲು ಹಣ  ಪಡೆದುಕೊಂಡು ತನ್ನ ಮೊಬೈಲಿನಲ್ಲಿ  ಮಂಗಳೂರು ಮಹಾನಗರ ಪಾಲಿಕೆಯ ಎಂಸಿಸಿ ಟ್ರೇಡ್ ಲೈಸೆನ್ಸ್ ಹಾಗೂ ಎಂಸಿಸಿ ಪ್ರೊಪರ್ಟಿ ಟ್ಯಾಕ್ಸ್ ವೆಬ್ ಸೈಟಿಗೆ ಲಾಗಿನ್ ಆಗಿ, ಉದ್ದಿಮೆ ಮಾಲಿಕರ ಮೊಬೈಲ್ ಒಟಿಪಿ ಪಡೆದು, ಹಿಂದಿನ ವರ್ಷದ  ಉದ್ದಿಮೆ ಪರವಾನಿಗೆಯನ್ನು ಹಾಗೂ ಆಸ್ತಿ ತೆರಿಗೆ ರಶೀದಿಯನ್ನು ಡೌನ್ ಲೋಡ್ ಮಾಡಿ, ಮೂರನೇ ಪಾರ್ಟಿ ಅಪ್ಲಿಕೇಶನ್ ಮುಖಾಂತರ ದಿನಾಂಕಗಳನ್ನು ಹಾಗೂ ಇನ್ನಿತರ ಮಾಹಿತಿಗಳನ್ನು ಎಡಿಟ್ ಮಾಡಿ ಅದನ್ನು ಪ್ರಿಂಟ್ ಮಾಡಿ, ದೇವಾಂಗ್ ಕೆ ಪಟೇಲ್ ಹಾಗೂ ಬಾಲಕೃಷ್ಣ ಸುವರ್ಣ ಅವರಿಗೆ ನೀಡಿದ್ದನು.

ಆರೋಪಿಯು ದೇವಾಂಗ್ ಕೆ ಪಟೇಲ್ ಹಾಗೂ ಬಾಲಕೃಷ್ಣ ಸುವರ್ಣ ಅವರಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ನೀಡಿ ವಂಚಿಸಿದ್ದು, ನಕಲಿ ದಾಖಲಾತಿಗಳನ್ನು ಸೃಷ್ಠಿಸಲು ಉಪಯೋಗಿಸಿದ ಸಲಕರಣೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.  ಆರೋಪಿತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನದಲ್ಲಿರುತ್ತಾನೆ. ಆರೋಪಿಯು ಇನ್ನೂ ಇತರ  ಉದ್ದಿಮೆದಾರರಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ನೀಡಿರುತ್ತಾನೆಯೇ ಎಂಬ ಬಗ್ಗೆ ಕಂಕನಾಡಿ ಮತ್ತು ಬರ್ಕೆ ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮನಪಾ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ ಅಲಿಯಾಸ್ ಮುನ್ನ ಬಂಧನ Rating: 5 Reviewed By: karavali Times
Scroll to Top