ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಸೂಚನೆ - Karavali Times ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಸೂಚನೆ - Karavali Times

728x90

16 July 2025

ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಸೂಚನೆ

ಬೆಂಗಳೂರು, ಜುಲೈ 16, 2025 (ಕರಾವಳಿ ಟೈಮ್ಸ್) : ರಾಜ್ಯಾದ್ಯಂತ ಮುಂದಿನ ಒಂದು ವಾರ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದಿದೆ. 

ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. 

ಮಳೆಯೊಂದಿಗೆ ಬಲವಾದ ಮೇಲ್ಮೈ ಗಾಳಿಯೂ ಬೀಸಲಿದೆ ಎನ್ನಲಾಗಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಜುಲೈ 16 ರಂದು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜುಲೈ 15 ರಿಂದ 19ರ ನಡುವೆ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ. ತಲುಪಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವ ಕುರಿತು ಎಚ್ಚರದಿಂದಿರಬೇಕು ಎಂದು ಹೇಳಿದೆ.

ಜುಲೈ 15 ರಿಂದ 21 ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಮುಂತಾದ ನಿರ್ದಿಷ್ಟ ಜಿಲ್ಲೆಗಳಲ್ಲಿ ಜುಲೈ 20 ಮತ್ತು 21 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು (ಗ್ರಾಮೀಣ ಮತ್ತು ನಗರ), ಮೈಸೂರು ಮತ್ತು ಮಂಡ್ಯ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ ಎಂದಿರುವ ಹವಾಮಾನ ಇಲಾಖೆ ಜುಲೈ 16 ರಂದು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಪ್ರಮುಖವಾಗಿ ಬಾಗಲಕೋಟೆ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮೂಲಕ ಹಗುರದಿಂದ ಮಧ್ಯಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಸೂಚನೆ Rating: 5 Reviewed By: karavali Times
Scroll to Top