ಉಡುಪಿ/ಮಂಗಳೂರು, ಜುಲೈ 23, 2025 (ಕರಾವಳಿ ಟೈಮ್ಸ್) : ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿರುವ ಹಿನ್ನೆಲೆಯಲ್ಲಿ, ಜುಲೈ 24 ರಂದು ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪಿಯು ತರಗತಿವರೆಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿ ಕೆ ಅವರು ಆದೇಶಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುನ್ನಚ್ಚರಿಕಾ ಕ್ರಮವಾಗಿ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮುಂದಿನ ಕೆಲವು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಮಂಗಳೂರು ತಾಲೂಕಿನಲ್ಲೂ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು ತಾಲೂಕಿಗೆ ಸೀಮಿತಗೊಂಡಂತೆ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ತರಗತಿವರೆಗೆ ಜುಲೈ 24 ರ ಗುರುವಾರ ರಜೆ ಘೋಷಿಸಿ ತಾಲೂಕು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
0 comments:
Post a Comment