ಬಂಟ್ವಾಳ, ಜುಲೈ 09, 2025 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜಿಪನಡು ಗ್ರಾಮದ ದೇರಾಜೆ ಎಂಬಲ್ಲಿ ಜೂನ್ 21 ರಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲವಾರು ದಾಳಿ ಎಂಬ ಸುಳ್ಳು ಸುದ್ದಿ ಪ್ರಸಾರ ಮಾಡಿದ ಡಿಟಿವಿ ಕನ್ನಡ ಎಂಬ ವೆಬ್ ನ್ಯೂಸ್ ಪೋರ್ಟಲ್ ವಿರುದ್ದ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 75/2025 ಕಲಂ 240 ಬಿ ಎನ್ ಎಸ್ ಪ್ರಕರಣ ರದ್ದತಿಗೆ ಬಗ್ಗೆ ರಾಜ್ಯ ಹೈಕೋರ್ಟಿಗೆ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರಕರಣ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಪ್ರಕರಣವನ್ನು ರದ್ದು ಮಾಡಲು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಪುತ್ತೂರು ನಿವಾಸಿ ಅಜರುದ್ದೀನ್ ಎಂಬವರು ಅರ್ಜಿ ಸಲ್ಲಿಸಿದ್ದರು. ಆದರೆ ಈ ಬಗ್ಗೆ ಸರ್ಕಾರದ ಪರವಾಗಿ ವಿಶೇಷ ಸರಕಾರಿ ನ್ಯಾಯವಾದಿ ಆಸ್ಮಾ ಅವರು ವಾದ ಮಂಡನೆ ಮಾಡಿದ ಬಳಿಕ, ಪ್ರಕರಣದ ರದ್ದತಿಗಾಗಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅರ್ಜಿದಾರರು ಹಿಂಪಡೆದಿರುತ್ತಾರೆ. ಪ್ರಕರಣದ ತನಿಖೆಯು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಮುಂದುವರಿಯಲಿದೆ ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
0 comments:
Post a Comment