ಬೆಂಗಳೂರು, ಜುಲೈ 19, 2025 (ಕರಾವಳಿ ಟೈಮ್ಸ್) : ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ವಸತಿಯುತ ಹೋಟೆಲ್ ಮ್ಯಾನೇಜ್‍ಮೆಂಟ್ ವೃತ್ತಿಪರ ತರಬೇತಿಯನ್ನು ಬೆಂಗಳೂರಿನ ಇನ್‍ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಇಲ್ಲಿ ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಅಲ್ಪಸಂಖ್ಯಾತ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್ಖ್, ಬೌದ್ದ, ಪಾರ್ಸಿ) ಸೇರಿದವರಾಗಿರಬೇಕು. ಅಭ್ಯರ್ಥಿಯ ವಾರ್ಷಿಕ ಆದಾಯ 8 ಲಕ್ಷ ಮೀರಿರಬಾರದು. ಅಭ್ಯರ್ಥಿ ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ರಿಂದ 35 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 2 ಕೊನೆ ದಿನಾಂಕವಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
0 comments:
Post a Comment