ಬಂಟ್ವಾಳ, ಜುಲೈ 14, 2025 (ಕರಾವಳಿ ಟೈಮ್ಸ್) : ಇನ್ನೋವಾ ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಗಾಯಗೊಂಡ ಘಟನೆ ಬಾಳ್ತಿಲ ಗ್ರಾಮದ ದಾಸಕೋಡಿ ಎಂಬಲ್ಲಿ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರರನ್ನು ಪುತ್ತೂರು ತಾಲೂಕು ಪಡ್ನೂರು ಗ್ರಾಮದ ನಿವಾಸಿಗಳಾದ ವೈ ಎಸ್ ತೇಜಸ್ (21) ಹಾಗೂ ಅವರ ಸಂಬಂಧಿ ಗೌತಮ್ ಎಂದು ಹೆಸರಿಸಲಾಗಿದೆ. ತೇಜಸ್ ಅವರು ಸವಾರರಾಗಿ ಹಾಗೂ ಗೌತಮ್ ಅವರು ಸಹಸವಾರರಾಗಿ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ಬಾಳ್ತಿಲ ಗ್ರಾಮದ ದಾಸಕೋಡಿ ಎಂಬಲ್ಲಿ ತಲುಪಿದಾಗ ಎದುರುಗಡೆಯಿಂದ ಕೆ ಜಗದೀಶ್ ನಾಯ್ಕ್ ಎಂಬವರು ಚಲಾಯಿಸಿಕೊಂಡು ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯರು ಬಿ ಸಿ ರೋಡಿನ ಸೋಮಯಾಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment