ಬಂಟ್ವಾಳ, ಜುಲೈ 10, 2025 (ಕರಾವಳಿ ಟೈಮ್ಸ್) : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಉಳ್ಳಾಲ ತಾಲೂಕು ಇರಾ ಗ್ರಾಮದ ಇರಾ ಜಂಕ್ಷನ್ನಿನಲ್ಲಿ ಜುಲೈ 7 ರಂದು ರಾತ್ರಿ ಸಂಭವಿಸಿದ್ದು, ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ಚಂದ್ರಶೇಖರ (54) ಎಂದು ಹೆಸರಿಸಲಾಗಿದೆ. ಇವರು ಇರಾ ಜಂಕ್ಷನ್ನಿನ ಅಮ್ಮ ಫ್ಯಾನ್ಸಿ ಸ್ಟೋರ್ ಎದುರುಗಡೆ ರಸ್ತೆ ದಾಟಲು ನಿಂತಿದ್ದ ವೇಳೆ ಮುಡಿಪು ಕಡೆಯಿಂದ ಕುಕ್ಕಾಜೆ ಕಡೆಗೆ ಅಹ್ಮದ್ ಜೌಹರ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ರಸ್ತೆಗೆಸೆಯಲ್ಪಟ್ಟ ಚಂದ್ರಶೇಖರ್ ಅವರ ತಲೆ ಹಾಗೂ ಕೈ-ಕಾಲುಗಳಿಗೆ ಗಾಯಗಳಾಗಿವೆ. ಅವರನ್ನು ದೇರಳಕಟ್ಟೆ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸ್ಥಳೀಯ ನಿವಾಸಿ ಬಸಂತ ಕುಮಾರ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment