ನಾವು ಜಾತಿವಾದಿ, ಮತೀಯವಾದಿಗಳಾಗದೆ ಮಾನವತಾವಾದಿಗಳಾಗಿ ಬದುಕೋಣ : ಮಾಜಿ ಸಚಿವ ರಮಾನಾಥ ರೈ ಕರೆ - Karavali Times ನಾವು ಜಾತಿವಾದಿ, ಮತೀಯವಾದಿಗಳಾಗದೆ ಮಾನವತಾವಾದಿಗಳಾಗಿ ಬದುಕೋಣ : ಮಾಜಿ ಸಚಿವ ರಮಾನಾಥ ರೈ ಕರೆ - Karavali Times

728x90

13 July 2025

ನಾವು ಜಾತಿವಾದಿ, ಮತೀಯವಾದಿಗಳಾಗದೆ ಮಾನವತಾವಾದಿಗಳಾಗಿ ಬದುಕೋಣ : ಮಾಜಿ ಸಚಿವ ರಮಾನಾಥ ರೈ ಕರೆ

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ 


ಬಂಟ್ವಾಳ, ಜುಲೈ 13, 2025 (ಕರಾವಳಿ ಟೈಮ್ಸ್) : ಈ ರಾಷ್ಟ್ರದ ಸಂವಿಧಾನದಲ್ಲಿರುವ ಜಾತ್ಯತೀತ, ಧರ್ಮ ನಿರಪೇಕ್ಷತೆ, ಸಮಾಜವಾದ ಪದದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿಯವರು ಜನರನ್ನು ಭಾವನಾತ್ಮಕವಾಗಿ ಮೋಸಮಾಡಿ ರಾಷ್ಟ್ರವನ್ನು ಅಧಃಪತನಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಆರೋಪಿಸಿದರು. 

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಶನಿವಾರ ಸಂಜೆ ನೇರಳಕಟ್ಟೆ ಜಂಕ್ಷನ್ನಿನಲ್ಲಿ ನಡೆದ “ಜನಜಾಗೃತಿ ಅಭಿಯಾನ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಾವು ಜಾತಿವಾದಿ, ಮತೀಯವಾದಿಗಳಾಗದೆ  ಮಾನವತಾವಾದಿಯಾಗಿ ಬದುಕೋಣ ಎಂದು ಕರೆ ನೀಡಿದರು.

ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ ಮಾತನಾಡಿಮ ಬಿಜೆಪಿಯವರು ಇತ್ತೀಚೆಗೆ ರಾಜ್ಯದಾದ್ಯಂತ ಪಂಚಾಯತ್ ಕಛೇರಿಯ ಮುಂಬಾಗದಲ್ಲಿ  ಪ್ರತಿಭಟನೆ ಮಾಡಿ ರಾಜ್ಯ ಸರಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಅವರು ಈ ದೇಶದ ಜನತೆಗೆ ಮಾಡಿರುವ ಅನ್ಯಾಯ, ಜನ ವಿರೋಧಿ ದುರಾಡಳಿತ, ಪೆÇಳ್ಳು ಭರವಸೆ ನೀಡಿ ವಂಚನೆ ಮಾಡಿರುವ ಬಗ್ಗೆ ಜನತೆಗೆ ಜನಜಾಗೃತಿ ಮೂಡಿಸುವ ಸಲುವಾಗಿ ಈ ಜನಜಾಗೃತಿ ಅಭಿಯಾನ ನಡೆಸಲಾಗುತ್ತಿದೆ ಎಂದರು. 

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಅದ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿ’ ಸೋಜ,  ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಘಟಕದ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಐಡಾ ಸುರೇಶ್, ಬಂಟ್ವಾಳ ಯೋಜನಾ ಪ್ರಾಧಿಕಾರ (ಬುಡಾ) ಅದ್ಯಕ್ಷ ಬೇಬಿ ಕುಂದರ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ವಿ ಪೂಜಾರಿ, ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ ಶ್ರೀಧರ ರೈ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರೇಮ, ಲಕ್ಷ್ಮಿ, ಮಾಜಿ ಅಧ್ಯಕ್ಷೆ ವಿಜಯಾ ಏಮಾಜೆ, ಬೂತ್ ಅಧ್ಯಕ್ಷರುಗಳಾದ ಸಕ್ಸಸ್ ಹಮೀದ್ ಕುಕ್ಕರಬೆಟ್ಟು, ಲತೀಫ್ ಪಂತಡ್ಕ ಮೊದಲಾದವರು ಭಾಗವಹಿಸಿದ್ದರು. 

ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ ನಿರಂಜನ್ ರೈ ಸ್ವಾಗತಿಸಿ, ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ನಾವು ಜಾತಿವಾದಿ, ಮತೀಯವಾದಿಗಳಾಗದೆ ಮಾನವತಾವಾದಿಗಳಾಗಿ ಬದುಕೋಣ : ಮಾಜಿ ಸಚಿವ ರಮಾನಾಥ ರೈ ಕರೆ Rating: 5 Reviewed By: karavali Times
Scroll to Top