ಬೆಂಗಳೂರು, ಜುಲೈ 01, 2025 (ಕರಾವಳಿ ಟೈಮ್ಸ್) : ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ. ಹೀಗಾಗಿ ಪತ್ರಿಕೋದ್ಯಮವು ಇದರಿಂದ ಹೊರಗೆ ಬರಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ವಾರ್ತಾ ಸೌಧದಲ್ಲಿ ಮಂಗಳವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ-2025, “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೆÇೀನ್ ಮಾಡಿ ಪ್ರಶ್ನೆ ಮಾಡುವವನಲ್ಲ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ, ಮೂಢನಂಬಿಕೆ ಬಿತ್ತುವುದನ್ನು ಪತ್ರಿಕಾ ವೃತ್ತಿ ಎಂದು ಕರೆಯಬೇಕಾ? ಜನರನ್ನು ಮೌಡ್ಯಕ್ಕೆ ತಳ್ಳುವುದು ಪತ್ರಿಕಾ ವೃತ್ತಿಯಾ? ಈ ಬಗ್ಗೆ ನೀವೆಲ್ಲರೂ ಯೋಚಿಸಬೇಕು ಎಂದು ಸಲಹೆ ನೀಡಿದ ಸಿಎಂ ನಾನು ಇಂದು ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಮಾಧ್ಯಮ ಸಂಜೀವಿನಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಪತ್ರಕರ್ತರಿಗೆ ಅನುಕೂಲ ಒದಗಿಸಿದ್ದೇನೆ. ನಮ್ಮ ಪರವಾಗಿ ಬರೆಯಲಿ ಎನ್ನುವ ಕಾರಣದಿಂದ ಇವನ್ನು ಜಾರಿ ಮಾಡಿರುವುದಲ್ಲ. ನೀವೆಲ್ಲ ಸತ್ಯ ಬರೆಯಿರಿ, ಜನರ ಪರವಾಗಿ, ಪ್ರಜಾಪ್ರಭುತ್ವದ ಪರವಾಗಿ ಇರಬೇಕು ಎಂಬುದು ನಮ್ಮ ಆಶಯ ಎಂದರು
ಸ್ವಾತಂತ್ರ್ಯಪೂರ್ವದಲ್ಲಿ ಜನರನ್ನು ಎಚ್ಚರಿಸುವ, ಸ್ವಾತಂತ್ರ್ಯ ಹೋರಾಟದ ಪರವಾಗಿ ಪತ್ರಿಕೆಗಳು ಕೆಲಸ ಮಾಡಿದ್ದವು. ಇಂದು ಪ್ರಜಾಪ್ರಭುತ್ವದ ಉಳಿವಿಗಾಗಿ ಶ್ರಮಿಸಬೇಕು. ಸಂವಿಧಾನದ ಮೌಲ್ಯಗಳು ಮತ್ತು ಸತ್ಯವನ್ನು ಮರೆಮಾಚುವ ಕೆಲಸ ಆಗಬಾರದು. ಎಲ್ಲ ಜನರಿಗೂ ಸಮಾನ ಅವಕಾಶ ಮತ್ತು ಜಾತಿ-ವರ್ಗ ರಹಿತ ಸಮಾಜ ಸೃಷ್ಟಿಯಾಗಬೇಕು ಎನ್ನುವುದು ಸಂವಿಧಾನದ ಮೌಲ್ಯ. ಇದನ್ನು ಎತ್ತಿ ಹಿಡಿಯುವುದು ಪತ್ರಿಕಾ ವೃತ್ತಿಯ ಜವಾಬ್ದಾರಿ.
ದ್ವೇಷದ, ಪ್ರೀತಿಯಿಲ್ಲದ ಸಮಾಜ ಸೃಷ್ಟಿಸುವ ಪ್ರಯತ್ನಕ್ಕೆ ಮಾಧ್ಯಮಗಳು ಬೆಂಬಲಿಸಬಾರದು. ನನ್ನ ಮಾತುಗಳನ್ನು ಕೇವಲ ಪಕ್ಷದ ಚೌಕಟ್ಟಿನಲ್ಲಿ ಮಾತ್ರ ನೋಡದೆ ಸಮಾಜಮುಖಿಯಾಗಿ ಕೂಡ ನೋಡಬೇಕು ಎಂದು ಸಿಎಂ ಮವಿ ಮಾಡಿದರು.
0 comments:
Post a Comment