ಧರ್ಮಸ್ಥಳ, ಜುಲೈ 17, 2025 (ಕರಾವಳಿ ಟೈಮ್ಸ್) : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆ ದಾಳಿ ನಡೆಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಸೌತಡ್ಕ ನಿವಾಸಿ ಬಾಲಕೃಷ್ಣ (60) ಎಂದು ಹೆಸರಿಸಲಾಗಿದೆ. ಗುರುವಾರ ಪೂರ್ವಾಹ್ನ ಸುಮಾರು 11 ರಿಂದ 12 ಗಂಟೆಯ ಅವಧಿಯಲ್ಲಿ ಘಟನೆ ನಡೆದಿದೆ. ಇವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಇವರನ್ನು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೆÇಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment