ಕಡಬ, ಜುಲೈ 17, 2025 (ಕರಾವಳಿ ಟೈಮ್ಸ್) : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿದಿದ್ದು, ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಹೆದ್ದಾರಿಯಿಂದ ಮಣ್ಣು ತೆರವುಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಆದರೂ ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.
17 July 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment