ಮಂಗಳೂರು, ಜುಲೈ 15, 2025 (ಕರಾವಳಿ ಟೈಮ್ಸ್) : ಕುಡುಪು ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿರುವ 5 ಅರ್ಜಿಗಳು ಮಂಗಳವಾರ ವಿಚಾರಣೆಗೆ ಬಂದಿದ್ದು, ಯಾವುದೇ ಅರ್ಜಿಯಲ್ಲೂ ಆರೋಪಿಗಳಿಗೆ ಜಾಮೀನು ನೀಡಲಾಗಿಲ್ಲ ಹಾಗೂ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಆರೋಪಿಗಳಾದ ಅನಿಲ್ ಕುಮಾರ್, ಸಂದೀಪ್, ಮನೀಶ್ ಶೆಟ್ಟಿ, ಪ್ರದೀಪ್ ಹಾಗೂ ವಿವಿಯನ್ ಆಲ್ವರೀಸ್ ಎಂಬವರ ಜಾಮೀನು ಅರ್ಜಿಗಳು ಇಂದು ವಿಚಾರಣೆಗೆ ಬಂದಿತ್ತು.
ಕಳೆದ ಎಪ್ರಿಲ್ 27 ರಂದು ಅಪರಾಹ್ನ ಸುಮಾರು 3 ಗಂಟೆ ವೇಳೆಗೆ ಮಂಗಳೂರು ಸಮೀಪದ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಹಿಂಬದಿಯ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಸಂದರ್ಭ ಕೇರಳ-ವಯನಾಡ್ ಮೂಲದ ಮೊಹಮ್ಮದ್ ಅಶ್ರಫ್ ಎಂಬಾತನಿಗೆ ಕೈಯಿಂದ ಹಲ್ಲೆ ನಡೆಸಿ ಕಾಲಿನಿಂದ ದೇಹದ ವಿವಿಧ ಭಾಗಗಳಿಗೆ ತುಳಿದು, ಕೋಲಿನಿಂದ ಆತನ ದೇಹದ ವಿವಿಧ ಭಾಗಗಳಿಗೆ ಹಲ್ಲೆ ನಡೆಸಿದ ಪರಿಣಾಮ ಗುಂಪು ಹಲ್ಲೆಯಿಂದ ಮೊಹಮ್ಮದ್ ಅಶ್ರಫ್ ಕೊಲೆಯಾಗಿದ್ದ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 37/2025 ಕಲಂ 189(2), 191(1)(3), 115(2), 103(2), 240, ಜತೆಗೆ 190 ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ. ಸದ್ರಿ ಪ್ರಕರಣಕ್ಕೆ ಸಂಬಂಧಿಪಟ್ಟಂತೆ ಮಂಗಳೂರು ಪೊಲೀಸರು ಈಗಾಗಲೇ ಒಟ್ಟು 21 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
0 comments:
Post a Comment