ಬಂಟ್ವಾಳ, ಜುಲೈ 21, 2025 (ಕರಾವಳಿ ಟೈಮ್ಸ್) : ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಎಂಬಲ್ಲಿ ಜುಲೈ 19 ರಂದು ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರನನ್ನು ನೀಲಯ್ಯ ಎಂದು ಹೆಸರಿಸಲಾಗಿದೆ. ಇವರು ನೇರಳಕಟ್ಟೆ ಕಡೆಯಿಂದ ಮೂರ್ಜೆ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ವೇಳೆ ಮೂರ್ಜೆ ಕಡೆಯಿಂದ ನೇರಳಕಟ್ಟೆ ಕಡೆಗೆ ಮಹಮ್ಮದ್ ಆಸಿಫ್ ಎಂಬವರು ಚಲಾಯಿಸಿಕೊಂಡು ಬಂದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಸ್ಕೂಟರ್ ಸವಾರ ನೀಲಯ್ಯ ಅವರ ತಲೆ, ಕೈ ಹಾಗೂ ಕಾಲಿಗೆ ಗಾಯಗಳಾಗಿದ್ದು, ಇವರ ಜೊತೆ ಇದ್ದ ಸಹಸವಾರಗೂ ಸಣ್ಣ ಪ್ರಮಾಣದ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment