ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ದನ ಕಳ್ಳ ಪಾರಿವಾಳ ಕಬೀರ್ ಅರೆಸ್ಟ್ - Karavali Times ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ದನ ಕಳ್ಳ ಪಾರಿವಾಳ ಕಬೀರ್ ಅರೆಸ್ಟ್ - Karavali Times

728x90

3 July 2025

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ದನ ಕಳ್ಳ ಪಾರಿವಾಳ ಕಬೀರ್ ಅರೆಸ್ಟ್

ಮಂಗಳೂರು, ಜುಲೈ 03, 2025 (ಕರಾವಳಿ ಟೈಮ್ಸ್) : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ತಂದು ಮುಡಿಪು ಕಂಬಳಪದವು ಕೆಐಡಿಬಿ ರಸ್ತೆಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಕುಖ್ಯಾತ ದನ ಕಳ್ಳನೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 12.05 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿರುತ್ತಾರೆ. 

ಮಂಗಳೂರು ನಗರಕ್ಕೆ ಬೆಂಗಳೂರು/ ಮುಂಬೈಯಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ತರಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಿಳಿ ಬಣ್ಣದ ಸ್ವಿಪ್ಟ್ ಕಾರಿನಲ್ಲಿ ಮುಡಿಪು ಕಂಬಳಪದವು ಕೆಐಡಿಬಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಈ ಕಾರ್ಯಾಚರಣೆ ನಡೆಸಿದ್ದಾರೆ. ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಆರೋಪಿ ಮೂಲತಃ ಮಗಳೂರು-ಕಸಬಾ ಬೆಂಗ್ರೆ ನಿವಾಸಿ, ಪ್ರಸ್ತುತ ಕೊಣಾಜೆ, ಅಸೈಗೋಳಿ-ಪಟ್ಟೋರಿ ಪೊಲೀಸ್ ಕ್ವಾಟ್ರಸ್ ರಸ್ತೆ ಎಂಬಲ್ಲಿ ವಾಸವಾಗಿರುವ ದಿವಂಗತ ಮೊಹಮ್ಮದ್ ಖಾಸಿಂ ಅವರ ಪುತ್ರ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ. 

ಬಂಧಿತ ಆರೋಪಿಯಿಂದ 1.20 ಲಕ್ಷ ರೂಪಾಯಿ ಮೌಲ್ಯದ 12.05 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಪೊನ್, ಕೆಎ25 ಎಂಎ8950 ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ಸ್ವಿಪ್ಟ್ ಕಾರು ಸಹಿತ ಒಟ್ಟು 4,31,250/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ  ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಆರೋಪಿ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ ಎಂಬಾತನ ವಿರುದ್ದ ಮಂಗಳೂರು ನಗರದ ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮಂಗಳೂರು ಪೂರ್ವ, ಕಂಕನಾಡಿ ನಗರ, ಉಳ್ಳಾಲ, ಬಜ್ಪೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆ, ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ 15ಕ್ಕಿಂತ ಹೆಚ್ಚು ದನ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ದನ ಕಳ್ಳ ಪಾರಿವಾಳ ಕಬೀರ್ ಅರೆಸ್ಟ್ Rating: 5 Reviewed By: karavali Times
Scroll to Top