![]() |
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಕೆ ಆನಂದ್ |
![]() |
ನೂತನ ಜಿ ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕರ್ಭಾರಿ |
ಮಂಗಳೂರು, ಜುಲೈ 08, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಕೆ ಆನಂದ್ ಅವರನ್ನು ಸರಕಾರ ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ನೂತನ ಜಿ ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯಾಗಿ ನರ್ವಾಡೆ ವಿನಾಯಕ್ ಕರ್ಭಾರಿ ಅವರನ್ನು ನೇಮಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಕರ್ಭಾರಿ ಅವರು 2021ರ ಕರ್ನಾಟಕ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದು, ಮಡಿಕೇರಿ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದರು.
ವರ್ಗಾವಣೆಗೊಂಡಿರುವ ಮಂಗಳೂರು ಸಿಇಒ ಕೆ ಆನಂದ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯಾಗಿ ಸರಕಾರ ನಿಯೋಜಿಸಿದೆ.
0 comments:
Post a Comment