ಮುಲ್ಕಿ ಲತೀಫ್ ಹತ್ಯೆ ಪ್ರಕರಣದಲ್ಲಿ ನಕಲಿ ಪಾಸ್ ಪೋರ್ಟ್ ಬಳಸಿ ದೇಶ-ವಿದೇಶದಲ್ಲಿ ಕಣ್ಣಾಮುಚ್ಚಾಲೆಯಾಡುತ್ತಿದ್ದ ಆರೋಪಿ ಮುಸ್ತಫಾ ಕೊನೆಗೂ ವಿಶೇಷ ಪೊಲೀಸ್ ತಂಡದ ಬಲೆಗೆ - Karavali Times ಮುಲ್ಕಿ ಲತೀಫ್ ಹತ್ಯೆ ಪ್ರಕರಣದಲ್ಲಿ ನಕಲಿ ಪಾಸ್ ಪೋರ್ಟ್ ಬಳಸಿ ದೇಶ-ವಿದೇಶದಲ್ಲಿ ಕಣ್ಣಾಮುಚ್ಚಾಲೆಯಾಡುತ್ತಿದ್ದ ಆರೋಪಿ ಮುಸ್ತಫಾ ಕೊನೆಗೂ ವಿಶೇಷ ಪೊಲೀಸ್ ತಂಡದ ಬಲೆಗೆ - Karavali Times

728x90

1 July 2025

ಮುಲ್ಕಿ ಲತೀಫ್ ಹತ್ಯೆ ಪ್ರಕರಣದಲ್ಲಿ ನಕಲಿ ಪಾಸ್ ಪೋರ್ಟ್ ಬಳಸಿ ದೇಶ-ವಿದೇಶದಲ್ಲಿ ಕಣ್ಣಾಮುಚ್ಚಾಲೆಯಾಡುತ್ತಿದ್ದ ಆರೋಪಿ ಮುಸ್ತಫಾ ಕೊನೆಗೂ ವಿಶೇಷ ಪೊಲೀಸ್ ತಂಡದ ಬಲೆಗೆ

ಮಂಗಳೂರು, ಜುಲೈ 01, 2025 (ಕರಾವಳಿ ಟೈಮ್ಸ್) : 2020 ರಲ್ಲಿ ನಡೆದ ಮುಲ್ಕಿ ಅಬ್ದುಲ್ ಲತೀಫ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದು, ಬಳಿಕ ಸುಪ್ರೀಂ ಕೋರ್ಟಿನಿಂದ ಜಾಮೀನು ರದ್ದಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ನಕಲಿ ಪಾಸ್ ಪೋರ್ಟ್ ಬಳಸಿ ದೇಶ-ವಿದೇಶಗಳಲ್ಲಿ ಕಣ್ಣಾಮುಚ್ಚಾಲೆಯಾಡುತ್ತಿದ್ದ ಆರೋಪಿಯನ್ನು ಕೊನೆಗೂ ವಿಶೇಷ ಪೊಲೀಸ್ ತಂಡ ಹೆಡೆಮುರಿ ಕಟ್ಟುವಲ್ಲಿ ಸಫಲವಾಗಿದೆ.

ಬಂಧಿತ ಆರೋಪಿಯನ್ನು ಮುಲ್ಕಿ ಸಮೀಪದ ಪಕ್ಷಿಕೆರೆ-ಕೆಮ್ರಾಲ್ ನಿವಾಸಿ ಮೊಯಿದ್ದೀನ್ ಅವರ ಪುತ್ರ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತಾ ಎಂದು ಹೆಸರಿಸಲಾಗಿದೆ. 2020 ರ ಜೂನ್ 5 ರಂದು ಮುಲ್ಕಿ ಪೆÇಲೀಸ್ ಠಾಣಾ ವ್ಯಾಪ್ತಿಯ ಮುಲ್ಕಿ ವಿಜಯ ಸನ್ನಿದಿ ಹೆದ್ದಾರಿ ಬಳಿ ಹಾಡಹಗಲೇ ರಸ್ತೆಯಲ್ಲಿ ಅಬ್ದುಲ್ ಲತೀಫ್ ಎಂಬವರನ್ನು ಆರೋಪಿಗಳಾದ ದಾವೂದ್ ಹಕೀಂ, ಮೊಹಮ್ಮದ್ ಮುಸ್ತಾಫ ಹಾಗೂ ಇತರರು ಸೇರಿ ಒಟ್ಟು 10 ಜನರ ತಂಡ ಕೊಲೆ ಮಾಡಿದ್ದು, ಎಲ್ಲಾ ಆರೋಪಿಗಳ  ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಪ್ರಕರಣ ಸದ್ಯ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. 

ಆರೋಪಿ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತಾ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ 2020 ರ ಅಕ್ಟೋಬರ್ 19 ರಂದು ಜಾಮೀನು ಪಡೆದಿದ್ದು, ಬಳಿಕ ಆತನ ಜಾಮೀನನ್ನು ಸುಪ್ರೀಂ ಕೋರ್ಟ್ 2022 ರ ಎಪ್ರಿಲ್ 22 ರಂದು ರದ್ದು ಮಾಡಿರುತ್ತದೆ. ಅಂದಿನಿಂದ ಆರೋಪಿ ಮೊಹಮ್ಮದ್ ಮುಸ್ತಫಾ ತಲೆಮರೆಸಿಕೊಂಡು ನಕಲಿ ಪಾಸ್ ಪೋರ್ಟ್ ಮೂಲಕ ವಿದೇಶಕ್ಕೆ ಪರಾರಿಯಾಗಿದ್ದನು. 

ತಲೆ ಮರೆಸಿಕೊಂಡಿದ್ದ ವಾರಂಟು ಅಸಾಮಿ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತಾ ಎಂಬಾತನ ಪತ್ತಗೆ ವಿಶೇಷ ಪೊಲೀಸ್ ತಂಡ ರಚಿಸಲಾಗಿದ್ದು, ಜೂನ್ 30 ರಂದು ಸೋಮವಾರ ಮುಲ್ಕಿಯ ಪಕ್ಷಿಕೆರೆ ಬಳಿ ಆತನನ್ನು ಪತ್ತೆ ಮಾಡಿದ ವಿಶೇಷ ಪೊಲೀಸ್ ತಂಡ ಮುಂದಿನ ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ.  ಈತನ ವಿಚಾರಣೆಯಲ್ಲಿ ಈತ ನಕಲಿ ಪಾಸ್ ಪೋರ್ಟ್ ಪಡೆದು ಓಮನ್ ರಾಷ್ಟ್ರಕ್ಕೆ ಪರಾರಿಯಾಗಿ ನಂತರ ನೇಪಾಳ ಮೂಲಕ ಭಾರತ ದೇಶಕ್ಕೆ ಬಂದಿರುವುದಾಗಿ ತಿಳಿದು ಬಂದಿದೆ. 

ಈತ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಈತನ ವಿರುದ್ದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಗ್ಗೆ ಮತ್ತು ವಿದೇಶ ಮತ್ತು ಭಾರತಕ್ಕೆ ಅಕ್ರಮವಾಗಿ ಪ್ರವೇಶ ಮಾಡಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಕಲಿ ಪಾಸ್ ಪೋರ್ಟ್ ಹೊಂದಿರುವ ಬಗ್ಗೆ ಬೆಂಗಳೂರಿನ ಬಸನಗುಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಈತನ ವಿರುದ್ದ ಮುಲ್ಕಿ ಪೆÇಲೀಸ್ ಠಾಣೆಯಲ್ಲಿ 4 ಮತ್ತು ಇತರೆ ಜಿಲ್ಲೆಯಲ್ಲಿ ಒಟ್ಟು 5 ಪ್ರಕರಣಗಳು ದಾಖಲಾಗಿದೆ. ಚಿಕ್ಕಮಗಳೂರು, ಉಡುಪಿ ಜಿಲ್ಲೆಯ ಠಾಣೆಗಳಲ್ಲಿ ಈತನ ವಿರುದ್ದ ಎರಡು ಪ್ರಕರಣಗಳಲ್ಲಿ ವಾರಂಟು ಬಾಕಿ ಇರುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮುಲ್ಕಿ ಲತೀಫ್ ಹತ್ಯೆ ಪ್ರಕರಣದಲ್ಲಿ ನಕಲಿ ಪಾಸ್ ಪೋರ್ಟ್ ಬಳಸಿ ದೇಶ-ವಿದೇಶದಲ್ಲಿ ಕಣ್ಣಾಮುಚ್ಚಾಲೆಯಾಡುತ್ತಿದ್ದ ಆರೋಪಿ ಮುಸ್ತಫಾ ಕೊನೆಗೂ ವಿಶೇಷ ಪೊಲೀಸ್ ತಂಡದ ಬಲೆಗೆ Rating: 5 Reviewed By: karavali Times
Scroll to Top