ಬಂಟ್ವಾಳ, ಜುಲೈ 15, 2025 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಮೇ 27 ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಹಾಗೂ ಜೊತೆಗಿದ್ದ ಖಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇಬ್ಬರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಕೊಲೆ ಪ್ರಕರಣದಲ್ಲಿ ಈಗಾಗಲೇ ಬಂಟ್ವಾಳ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಂಟ್ವಾಳ ನಿವಾಸಿ ಅಭಿನ್ ರೈ (32) ಹಾಗೂ ಶೃಂಗೇರಿ ನಿವಾಸಿ ರವಿ ಸಂಜಯ್ (29) ಎಂಬವರು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಮಂಗಳವಾರ ತಿರಸ್ಕ್ರರಿಸಿದೆ. ಆರೋಪಿಗಳ ನ್ಯಾಯಾಂಗ ಬಂಧನ ಮುಂದುವರಿದಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
0 comments:
Post a Comment