ಮಂಗಳೂರು, ಜುಲೈ 06, 2025 (ಕರಾವಳಿ ಟೈಮ್ಸ್) : ಜುಲೈ 2 ರಂದು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಮಂಗಳೂರು ಸೆನ್ ಪೊಲೀಸರಿಂದ ಬಂಧಿತರಾಗಿರುವ 5 ಮಂದಿ ಆರೋಪಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿಯನ್ನು ಭಾನುವಾರ ಮೈಸೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ,
ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ನಿವಾಸಿ ದಿವಾಕರ ಶೆಟ್ಟಿ ಅವರ ಪುತ್ರ ಧ್ರುವ್ ಡಿ ಶೆಟ್ಟಿ (22) ಎಂದು ಹೆಸರಿಸಲಾಗಿದೆ. ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಮೊಬೈಲ್ ಫೆÇೀನ್ ಹಾಗೂ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು, ಇನ್ನುಳಿದ ಆರೋಪಿಗಳನ್ನೂ ಕೂಡಾ ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರಿನ ಪೋಷಕರಿಬ್ಬರು ತಮ್ಮ ಮಗ ಗಾಂಜಾ ವ್ಯಸನಿಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನೀಡಿದ ದೂರಿನಂತೆ ಜುಲೈ ಮಂಗಳೂರು ಸೆನ್ ಕ್ರೈಂ ಪೆÇಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 31/2025 ಕಲಂ 8(ಬಿ) 8(ಸಿ), 20(ಬಿ)(11)(ಬಿ) ಎನ್ ಡಿ ಪಿ ಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ಮಂಗಳೂರಿನ ಪಡುಶೆಡ್ಡೆ ಗ್ರಾಮದ ಹಾಲಾಡಿ ಎಂಬ ಸ್ಥಳದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ತಯಾರಿ ನಡೆಸುತ್ತಿರುವ ವೇಳೆ ಕಾರ್ಯಾಚರಣೆ ನಡೆಸಿದ ಪೆÇಲೀಸರು ಐದು ಮಂದಿ ಆರೋಪಿಗಳಾದ ಮಂಗಳೂರು-ಬಿಕರ್ನಕಟ್ಟೆ ಸಮೀಪದ ಅಡು ಮರೋಳಿ ನಿವಾಸಿ ರಾಜೇಶ್ ತಾರನಾಥ್ ಅವರ ಪುತ್ರ ತುಷಾರ್ ಅಲಿಯಾಸ್ ಸೋನು (21), ನಾಗುರಿ ನಿವಾಸಿ ಬಾಲಕೃಷ್ಣ ಶೆಟ್ಟಿ ಅವರ ಪುತ್ರ ಧನ್ವಿ ಶೆಟ್ಟಿ (20), ಜಲ್ಲಿಗುಡ್ಡೆ ನಿವಾಸಿ ಶೀತಲ್ ಕುಮಾರ್ ಅವರ ಪುತ್ರ ಸಾಗರ್ ಕರ್ಕೇರಾ (19), ಶಕ್ತಿನಗರ ನಿವಾಸಿ ರಾಜು ಥಾಪ ಅವರ ಪುತ್ರ ವಿಕಾಸ್ ಥಾಪ ಅಲಿಯಾಸ್ ಪುಚ್ಚಿ (23) ಹಾಗೂ ಅಳಕೆ-ಕಂಡೆಟ್ಟು ನಿವಾಸಿ ದಿವಂಗತ ಹರೀಶ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್ (24) ಎಂಬವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಬಂಧಿತ ಆರೋಪಿಗಳ ಪೈಕಿ ಪ್ರತಿಯೊಬ್ಬರ ಬಳಿಯೂ 1 ಕೆಜಿಗಿಂತ ಹೆಚ್ಚಿನ ಪ್ರಮಾಣದ ಗಾಂಜಾವನ್ನು ಹಾಗೂ ಗಾಂಜಾ ಪ್ಯಾಕೇಟ್ ಸೇರಿದಂತೆ ಸುಮಾರು 5.20 ಲಕ್ಷ ರೂಪಾಯಿ ಮೌಲ್ಯದ ಒಟ್ಟು 5.759 ಕೆಜಿ ತೂಕದ ನಿಷೇಧಿತ ಮಾದಕ ವಸ್ತುವಾದ ಗಾಂಜಾ ಮತ್ತು ಆರೋಪಿತರು ಕೃತ್ಯಕ್ಕೆ ಬಳಸಿದ 6 ಮೊಬೈಲ್ ಪೆÇನ್, 1 ದ್ವಿಚಕ್ರ ವಾಹನವನ್ನು ಪೆÇಲೀಸರು ವಶಪಡಿಸಿಕೊಂಡಿದ್ದರು.
0 comments:
Post a Comment