ಬಂಟ್ವಾಳ, ಜುಲೈ 08, 2025 (ಕರಾವಳಿ ಟೈಮ್ಸ್) : ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಜನರಲ್ ಸ್ಟೋರ್ ಅಂಗಡಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಸಮೀಪದ ಅಜ್ಜಿಬಾಕಿಯಾರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಇಲ್ಲಿನ ನಿವಾಸಿ ಲೋಕೇಶ್ ಹಾಗೂ ಸುಜಾತ ಶೆಟ್ಟಿ ಎಂಬವರು ವ್ಯಾಪಾರ ನಡೆಸುತ್ತಿದ್ದ ಸೂರ್ಯಚಂದ್ರ ಜನರಲ್ ಸ್ಟೋರ್ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಸೈ ಖೀರಪ್ಪ ಘಟಕಾಂಬಳೆ ಅವರ ನೇತೃತ್ವದ ಪೊಲೀಸರು ಸೋಮವಾರ ರಾತ್ರಿ ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅಂಗಡಿಯಲ್ಲಿ ದಾಸ್ತಾನಿಟ್ಟಿದ್ದ ಸುಮಾರು 1250/- ರೂಪಾಯಿ ಮೌಲ್ಯದ ಒಟ್ಟು 2.25 ಲೀಟರ್ ಮದ್ಯ ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment