ಬಂಟ್ವಾಳ, ಜುಲೈ 21, 2025 (ಕರಾವಳಿ ಟೈಮ್ಸ್) : ಪಿಕಪ್ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡ ಘಟನೆ ಬಿ ಕಸಬಾ ಗ್ರಾಮದ ಜಕ್ರಿಬೆಟ್ಟು ಬಸ್ಸು ನಿಲ್ದಾಣ ಬಳಿ ಜುಲೈ 18 ರಂದು ಸಂಭವಿಸಿದ್ದು, ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಸ್ಕೂಟರ್ ಸವಾರನನ್ನು ಶ್ರವಣ್ ಎಂದು ಹೆಸರಿಸಲಾಗಿದೆ. ಇವರು ತನ್ನ ಸ್ಕೂಟರಿನಲ್ಲಿ ಬೆಳ್ತಂಗಡಿ ಕಡೆಯಿಂದ ಬಿ ಸಿ ರೋಡು ಕಡೆಗೆ ಸಂಚರಿಸುತ್ತಿದ್ದ ವೇಳೆ ಬಂಟ್ವಾಳ ಪೇಟೆ ಕಡೆಯಿಂದ ಅಗ್ರಾರ್ ಕಡೆಗೆ ಕಾಶ್ಮೀರ್ ಮೊರಾಸ್ ಎಂಬವರು ಚಲಾಯಿಸಿಕೊಂಡು ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಸ್ಕೂಟರ್ ಸವಾರ ಶ್ರವಣ್ ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟ್ಟು ಬಲ ಕೈಗೆ, ಬಲ ಕಾಲಿಗೆ ಮುಖ ಹಾಗೂ ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದು, ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಅಲ್ಲಿ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ನರಿಕೊಂಬು ನಿವಾಸಿ ಸುಮಿರಾಜ್ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment