ಮಂಗಳೂರು, ಜುಲೈ 08, 2025 (ಕರಾವಳಿ ಟೈಮ್ಸ್) : ತಾಯಿಯೊಂದಿಗೆ ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ಅಪರಿಚಿತ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು-ನೆಹರುನಗರ ಜಂಕ್ಷನ್ನಿನಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಮಂಗಳವಾರ ಬೆಳಿಗ್ಗೆ ಅಪ್ರಾಪ್ತ ಬಾಲಕಿ ತನ್ನ ತಾಯಿಯೊಂದಿಗೆ ಪುತ್ತೂರು ನೆಹರೂನಗರ ಜಂಕ್ಷನ್ನಿನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬಂದು ಸಂತ್ರಸ್ಥ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿರುತ್ತಾನೆ.
ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 53/2025 ಕಲಂ 126(2), 74, 115(2), 353(2) ಬಿ ಎನ್ ಎಸ್-2023, ಪೋಕ್ಸೋ 2012 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸದ್ರಿ ಪ್ರಕರಣದ ಸಂತ್ರಸ್ತ ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಪ್ರಕರಣದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಯಾವುದೇ ಮಾಧ್ಯಮಗಳು ಪ್ರಸಾರ ಮಾಡುವಾಗ ಬಾಲ ನ್ಯಾಯ ಕಾಯ್ದೆ ಹಾಗೂ ಬಾಲ ನ್ಯಾಯ ನಿಯಮಾವಳಿಗಳನ್ನು ಪಾಲಿಸುವಂತೆ ಪೊಲೀಸರು ಸೂಚಿಸಿದ್ದಾರೆ.
0 comments:
Post a Comment