ಬಂಟ್ವಾಳ, ಜುಲೈ 01, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಅಧಿಕೃತವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಮರಳುಗಾರಿಗೆ ಮತ್ತು ಕಲ್ಲು ಗಣಿಗಾರಿಕೆಯನ್ನು ಸ್ಥಳೀಯಾಡಳಿತದಿಂದಲೇ ನಡೆಸಲು ಕ್ರಮ ಕೈಗೊಳ್ಳಬೇಕು. ಎಲ್ಲರಿಗೂ ಕಡಿಮೆ ದರದಲ್ಲಿ ಸರಳವಾಗಿ ಮತ್ತು ಸರಾಗವಾಗಿ ಮರಳು ಪೂರೈಕೆ ಆಗುವಂತೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉದ್ಯೋಗಾವಕಾಶಗಳು ಸಿಗುವಂತೆ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಪ್ರಗತಿಪರ ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ (ಎಐಸಿಸಿಟಿಯು) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಬಂಟ್ವಾಳ ತಹಶಿಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿಪರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘವು ಸ್ವಾಗತಿಸುತ್ತದೆ. ಆದರೆ ಅದರ ಜೊತೆಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕೃತವಾಗಿ ಮರಳು, ಕೆಂಪು ಕಲ್ಲು ತೆಗೆಯಲು ಅವಕಾಶ ಮಾಡಿಕೊಡಬೇಕಾದ ಆಡಳಿತ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವುದನ್ನು ತೀವ್ರವಾಗಿ ವಿರೋಧಿಸುತ್ತದೆ ಎಂದು ಸಂಘ ಹೇಳಿದೆ.
ನಿಷೇಧದಿಂದ ಕಟ್ಟಡ, ಮನೆ ನಿರ್ಮಾಣ ಸೇರಿದಂತೆ ಎಲ್ಲಾ ರೀತಿಯ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಿವೆ. ಈ ರೀತಿಯ ತೀರ್ಮಾನಗÀಳನ್ನು ತೆಗೆದುಕೊಳ್ಳುವಾಗ ಅಧಿಕೃತ ಯೋಜನೆಗಳಿಗೆ ತೊಂದರೆಗಳು ಆಗದ ರಿತಿಯಲ್ಲಿ ಕ್ರಮ ಕೈಗೊಳ್ಳಬೇಕು. ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಗಳಿಂದಲೇ ಅಧಿಕೃತವಾಗಿ ಮರಳು ದೊರೆಯಬೇಕು ಅಧಿಕೃತ ಮರಳು ಮತ್ತು ಕೆಂಪು ಕಲ್ಲು ಪೂರೈಕೆ ಆಗದೇ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತೀವ್ರವಾದ ಸಮಸ್ಯೆಯನ್ನು ಎದುರಿಸಿದ್ದಾರೆ. ಆವರ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಿರುವ ಸಂಘ ಸರಕಾರ ಶೀಘ್ರವಾಗಿ ಮಧ್ಯ ಪ್ರವೇಶಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದೆ.
ನಿಯೋಗದಲ್ಲಿ ಸಂಘದ ಆದ್ಯಕ್ಷ ರಾಮಣ್ಣ ವಿಟ್ಲ, ಕಾರ್ಯದರ್ಶಿ ಅಚ್ಯುತ ಕಟ್ಟೆ, ಮುಖಂಡರಾದ ರಾಜಾ ಚೆಂಡ್ತಿಮಾರ್, ರಘುರಾಮ ಪಳೇರಿ ಇದ್ದರು.
0 comments:
Post a Comment