ಪುತ್ತೂರು, ಜುಲೈ 03, 2025 (ಕರಾವಳಿ ಟೈಮ್ಸ್) : ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಬುಧವಾರ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಶ್ರಫ್ ಬಾವು ಎಂಬವರ ನೇತೃತ್ವದಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಅಕ್ರಮ ಗುಂಪು ಸೇರಿ ಧ್ವನಿವರ್ಧಕ ಬಳಸಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಸುಮಾರು 30 ಮಂದಿ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಗ್ಗೆ ಆರೋಪಿತರುಗಳ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ 53-2025 ಕಲಂ 189(ಸಿ), ಬಿ.ಎನ್.ಎಸ್ ಮತ್ತು ಕಲಂ 109 ಕರ್ನಾಟಕ ಪೆÇಲೀಸ್ ಕಾಯ್ದೆ 1963 ಪ್ರಕಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment