ಮಂಗಳೂರು, ಜುಲೈ 08, 2025 (ಕರಾವಳಿ ಟೈಮ್ಸ್) : ಪುತ್ತೂರು-ನೆಹರುನಗರ ಜಂಕ್ಷನ್ನಿನಲ್ಲಿ ತಾಯಿಯೊಂದಿಗೆ ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತರ ಆರೋಪಿಯನ್ನು ಕಬಕ ನಿವಾಸಿ ನವೀನ್ ಚಂದ್ರ (49) ಎಂದು ಹೆಸರಿಸಲಾಗಿದೆ. ಬಂಧಿತ ಆರೋಪಿಗೆ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ ತಾಯಿಯೊಂದಿಗೆ ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ಆರೋಪಿ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿರುತ್ತಾನೆ.
ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 53/2025 ಕಲಂ 126(2), 74, 115(2), 353(2) ಬಿ ಎನ್ ಎಸ್-2023, ಪೋಕ್ಸೋ 2012 ರಂತೆ ಪ್ರಕರಣ ದಾಖಲಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
0 comments:
Post a Comment