ಬಂಟ್ವಾಳ, ಜುಲೈ 25, 2025 (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ 1ನೇ ವಾರ್ಡಿನ ಬಿ ಕಸ್ಬಾ ಗ್ರಾಮದ ಬಾರೆಕಾಡು ಆಶ್ರಯ ಕಾಲೊನಿಯಲ್ಲಿ ಶುಕ್ರವಾರ ಬೀಸಿದ ಬಿರುಗಾಳಿ ಮಳೆಗೆ ಎರಡು ಮನೆಗಳ ಮಾಡು, ಹಂಚು, ಸಿಮೆಂಟ್ ಶೀಟುಗಳು ಹಾರಿ ಹೋಗಿದ್ದು, ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಘಟನೆಯಿಂದ ಸಾವಿರಾರು ರೂಪಾಯಿ ನಷ್ಟ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0 comments:
Post a Comment