ಬಂಟ್ವಾಳ, ಜುಲೈ 13, 2025 (ಕರಾವಳಿ ಟೈಮ್ಸ್) : ಹತ್ತು ವರ್ಷಗಳ ಹಿಂದೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ಬಿಹಾರ ಮೂಲದ ಆರೋಪಿಯನ್ನು ವಿಟ್ಲ ಪೊಲೀಸರು ಬಿಹಾರದಿಂದಲೇ ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಅತ್ಯಾಚಾರ ಆರೋಪಿಯನ್ನು ಬಿಹಾರ ರಾಜ್ಯದ ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂದು ಹೆಸರಿಸಲಾಗಿದೆ. 2015 ರ ನವೆಂಬರ್ 4 ರಂದು ರಾತ್ರಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 218/2015 ಕಲಂ 448, 341, 323, 376(ಜಿ), 506, 34 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು. ಆರೋಪಿ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆತನನ್ನು ವಿಟ್ಲ ಪೊಲೀಸರು, ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಎಂಬಲ್ಲಿಂದ ಸ್ಥಳೀಯ ಪೊಲೀಸರ ಸಹಕಾರದಲ್ಲಿ ವಶಕ್ಕೆ ಪಡೆದು, ಬಂಟ್ವಾಳಕ್ಕೆ ಕರೆ ತಂದಿದ್ದು, ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
0 comments:
Post a Comment