ಮಂಗಳೂರು, ಜುಲೈ 31, 2025 (ಕರಾವಳಿ ಟೈಮ್ಸ್) : 2023ನೇ ಸಾಲಿನಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಬಾಲಕಿ ಅತ್ಯಾಚಾರ ಪ್ರಕರಣದ ಆರೋಪಿ ಸಜಿಪನಡು ಗ್ರಾಮದ ಬಸ್ತಿಗುಡ್ಡೆ ನಿವಾಸಿ ಅಬ್ದುಲ್ ಅಜೀಜ್ ಎಂಬವರ ಪುತ್ರ ಮನ್ಸೂರ್ ಅಲಿಯಾಸ್ ಮೊಹಮ್ಮದ್ ಮನ್ಸೂರ್ ಅಲಿಯಾಸ್ ಜಾಬೀರ್ (30) ಎಂಬಾತನಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-2 (ಪೊಕ್ಸೋ) ಮಂಗಳೂರು ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ನ್ಯಾಯಾಲಯವು ಆರೋಪಿತನಿಗೆ 20 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಮತ್ತು ಕಲಂ 506 ಐ.ಪಿ.ಸಿ ಪ್ರಕರಣದಲ್ಲಿ ಆರೋಪಿಗೆ 5 ಸಾವಿರ ರೂಪಾಯಿ ದಂಡ ಮತ್ತು 1 ವರ್ಷ ಶಿಕ್ಷೆ ವಿಧಿಸಿದೆ.
ಮಂಗಳೂರು ನಗರ ಮಹಿಳಾ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿ ಮನ್ಸೂರ್ @ ಮೊಹಮ್ಮದ್ ಮನ್ಸೂರ್ @ ಜಾಬೀರ್ ಎಂಬಾತ 2023ರ ಮೇ 30 ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬೆದರಿಸಿ ವಿಡಿಯೋ ಮಾಡಿರುತ್ತಾನೆ. ಆ ಬಗ್ಗೆ ಬಾಲಕಿ ಮಂಗಳೂರು ಮಹಿಳಾ ಪೆÇಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಅಪರಾಧ ಕ್ರಮಾಂಕ 128/2023 ಕಲಂ 363, 376(2)(ಎನ್), 376(3), 506 ಐಪಿಸಿ ಮತ್ತು ಕಲಂ 6 ಪೊಕ್ಸೋ ಕಾಯಿದೆಯಂತೆ 2023 ರ ಡಿಸೆಂಬರ್ 23 ರಂದು ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆರೋಪಿಯು ಸುಮಾರು 8 ತಿಂಗಳುಗಳ ಕಾಲ ತಲೆಮರೆಸಿಕೊಂಡಿದ್ದು, 2024 ರ ಜುಲೈ 2 ರಂದು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.
ಪ್ರಕರಣದಲ್ಲಿ ತನಿಖೆ ಕೈಗೊಂಡ ಮಹಿಳಾ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಗುರುರಾಜ್ ಅವರು ಭಾಗಶಃ ತನಿಖೆಯನ್ನು ಪೂರೈಸಿ ಪ್ರಕರಣದಲ್ಲಿ ಮುಂದಿನ ತನಿಖೆಯನ್ನು ರಾಜೆಂದ್ರ ಬಿ ಅವರು ಕೈಗೊಂಡಿರುತ್ತಾರೆ. ಪ್ರಕರಣದಲ್ಲಿ ತನಿಖಾಧಿಕಾರಿಯವರು ಪೂರಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನಿಗದಿತ ಸಮಯದ ಒಳಗಾಗಿ ತನಿಖೆ ಪೂರೈಸಿ ಆರೋಪಿಯ ವಿರುದ್ಧ ದೋಷರೋಪಣಾ ಪತ್ರ ಸಲ್ಲಿಸಲಾಗಿತ್ತು.
ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-2 (ಪೊಕ್ಸೋ ) ನ್ಯಾಯಾಲಯ ಮಂಗಳೂರು ಇಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗಿದ್ದು, ಸರಕಾರಿ ಅಭಿಯೋಜಕ ಬದ್ರಿನಾಥ ಮತ್ತು ವಿಶೇಷ ಸರಕಾರಿ ಅಭಿಯೋಜಕಿ ಶ್ರೀಮತಿ ಸಹನಾದೇವಿ ಬೋಳೂರು ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದರು.
2025 ರ ಜುಲೈ 30 ರಂದು ನ್ಯಾಯಾಧೀಶರಾದ ಮಾನು ಕೆ.ಎಸ್ ಅವರು ಆರೋಪಿಗೆ ಬಾಲಕಿಯ ಅತ್ಯಾಚಾರದ ಆರೋಪದ ಅಡಿಯಲ್ಲಿ 20 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ಮತ್ತು ಬೆದರಿಕೆ ನೀಡಿರುವ ಪ್ರಕರಣದಲ್ಲಿ ಆರೋಪಿಗೆ 5 ಸಾವಿರ ರೂಪಾಯಿ ದಂಡ ಮತ್ತು 1 ವರ್ಷ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
0 comments:
Post a Comment