ಮಂಗಳೂರು, ಜುಲೈ 16, 2025 (ಕರಾವಳಿ ಟೈಮ್ಸ್) : ಗಂಡನೇ ಹೆಂಡತಿಯನ್ನು ಇತರರೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಒತ್ತಾಯಿಸಿ ವೀಡಿಯೋ ಚಿತ್ರೀಕರಣ ಮಾಡಿ ಬಲವಂತದ ಸಂಪರ್ಕ ಮಾಡುವಂತೆ ಒತ್ತಾಯಿಸಿದ ಬಗ್ಗೆ ಪತ್ನಿ ನೀಡಿದ ದೂರಿನಂತೆ ಕಾರ್ಯಾಚರಣೆ ನಡೆಸಿದ ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿಗಳಾದ ಸಂತ್ರಸ್ತೆಯ ಗಂಡ ಹಾಗೂ ಕಾವೂರು ಪೊಲೀಸ್ ಠಾಣಾ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಸಂತ್ರಸ್ತ ಮಹಿಳೆ ಮಂಗಳವಾರ (ಜುಲೈ 15) ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ಲಿಖಿತ ದೂರು ನೀಡಿದ್ದು, ತನ್ನ ಗಂಡನು ಹಣಕ್ಕಾಗಿ ಒತ್ತಾಯಪೂರ್ವಕವಾಗಿ ಬೇರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಮಾಡಿ, ಅದರ ವಿಡಿಯೋವನ್ನು ಚಿತ್ರೀಕರಣ ಮಾಡಿ, ಇತರರೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಡುವುದಾಗಿ ಬೆದರಿಸಿರುವುದಾಗಿದೆ. ಸಂತ್ರಸ್ಥ ಮಹಿಳೆಯು ತನಗೆ ಪರಿಚಯವಿರುವ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ಎಂಬಾತನಿಗೆ ಈ ಬಗ್ಗೆ ತಿಳಿಸಿದಾಗ, ಚಂದ್ರನಾಯ್ಕ್ ಸಂತ್ರಸ್ಥೆಯ ಮನೆಗೆ ಹೋಗಿ ಗಂಡನ ಮೊಬೈಲ್‍ನಲ್ಲಿದ್ದ ಪೊಟೋ ಮತ್ತು ವಿಡಿಯೋವನ್ನು ಅಳಿಸಿರುತ್ತಾನೆ. ನಂತರ ಸಂತ್ರಸ್ಥೆಯ ಗಂಡನ ದುಷ್ಪ್ರೇರಣೆಯಂತೆ ಚಂದ್ರನಾಯ್ಕ್ ಸಂತ್ರಸ್ಥ ಮಹಿಳೆಯೊಂದಿಗೆ ಒತ್ತಾಯ ಪೂರ್ವಕವಾಗಿ ಅವಳ ಇಚ್ಚೆಯ ವಿರುದ್ದ ದೈಹಿಕ ಸಂಪರ್ಕ ನಡೆಸಿರುತ್ತಾನೆ. ಸಂತ್ರಸ್ಥೆಯ ದೂರಿನ ಹಿನ್ನಲೆಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ಥ ಮಹಿಳೆಯ ಗಂಡ ಮತ್ತು ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಚಂದ್ರನಾಯ್ಕ್ ಇಬ್ಬರನ್ನು ಪೊಲೀಸರು ದಸ್ತಗಿರಿ ಮಾಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment