ಬಂಟ್ವಾಳ, ಜುಲೈ 22, 2025 (ಕರಾವಳಿ ಟೈಮ್ಸ್) : ಸೋಮವಾರ ಮುಂಜಾನೆ ನಿಧನರಾದ ಕಾಂಗ್ರೆಸ್ ಮುಖಂಡ ಜನಾರ್ದನ ಚೆಂಡ್ತಿಮಾರ್ ಅವರ ಮನೆಗೆ ರಾತ್ರಿ ವೇಳೆ ಭೇಟಿ ನೀಡಿದ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಕಾಂಗ್ರೆಸ್ ಪಕ್ಷದ ನಾಯಕರೂ, ದಲಿತರ ಧ್ವನಿಯಾಗಿ ದಲಿತ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಬಂಟ್ವಾಳ ಪುರಸಭಾ ಸದಸ್ಯ ಜನಾರ್ದನ ಚೆಂಡ್ತಿಮಾರ್ ಅವರ ನಿಧನ ತುಂಬಲಾರದ ನಷ್ಟವಾಗಿದ್ದು, ಅವರ ನಿಧನದ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಕುಟುಂಬ ವರ್ಗಕ್ಕೂ, ಅಭಿಮಾನಿಗಳಿಗೂ, ಕಾಂಗ್ರೆಸ್ ಕಾರ್ಯಕರ್ತರಿಗೂ ನೀಡಲಿ ಎಂದು ಕುಟುಂಬ ವರ್ಗಕ್ಕೆ ಸಾಂತ್ವನ ತಿಳಿಸಿದರು.
ಈ ಸಂದರ್ಭ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುಲ್ ರಝಕ್ ಕುಕ್ಕಾಜೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಮಂಗಳೂರು ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ನವಾಝ್ ನರಿಂಗಾನ, ಪ್ರಮುಖರಾದ ವಿಶ್ವನಾಥ ಗೌಡ ಮಣಿ, ರಾಜೀವ್ ಕಕ್ಕೆಪದವು ಸಹಿತ ದಲಿತ ಮುಖಂಡರು, ಜನಾದರ್Àನ ಚೆಂಡ್ತಿಮಾರ್ ಕುಟುಂಬಸ್ಥರು ಉಪಸ್ಥಿತರಿದ್ದರು.
0 comments:
Post a Comment