ಪುತ್ತೂರು, ಜುಲೈ 14, 2025 (ಕರಾವಳಿ ಟೈಮ್ಸ್) : ತಾಲೂಕಿನ ಕಸ್ಬಾ ಗ್ರಾಮದ ಬೊಳುವಾರು ಎಂಬಲ್ಲಿ ಸೋಮವಾರ ಮಧ್ಯಾಹ್ನ ಕೈಯಲ್ಲಿ ತಲವಾರು ಹಿಡಿದು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿದ್ದ ವ್ಯಕ್ತಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹಾಸನ ಮೂಲದ, ಪ್ರಸ್ತುತ ಬಂಟ್ವಾಳದಲ್ಲಿ ವಾಸವಾಗಿರುವ ರಾಜು (45) ಎಂದು ಗುರುತಿಸಲಾಗಿದೆ. ಈತ ಸೋಮವಾರ ಮಧ್ಯಾಹ್ನ ಪುತ್ತೂರು-ಬೊಳುವಾರಿನಲ್ಲಿ ತನ್ನ ಕೈಯಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಸ್ಥಳಕ್ಕಾಗಮಿಸಿ ಪುತ್ತೂರು ನಗರ ಠಾಣಾ ಪೊಲೀಸರು ಆತನನ್ನು ಸಾರ್ವಜನಿಕರ ಸಹಾಯದಿಂದ ಹಿಡಿದು ವಿಚಾರಿಸಿದ್ದಾರೆ.
ಆರೋಪಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯ ಬಗ್ಗೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 59/2025, ಕಲಂ 25(1ಬಿ)(ಬಿ) ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಹಾಗೂ 110 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
0 comments:
Post a Comment