ಬಂಟ್ವಾಳ, ಜುಲೈ 26, 2025 (ಕರಾವಳಿ ಟೈಮ್ಸ್) : ಕಳೆದ ಎರಡು ವರ್ಷಗಳಿಂದ ಶ್ವಾಸಕೋಶದ ಅನಾರೋಗ್ಯದಿಂದ ಮನೆಯಲ್ಲೇ ಇದ್ದ ವ್ಯಕ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಣಿನಾಲ್ಕೂರು ಗ್ರಾಮದ ಅಂಬೇಡ್ಕರ ನಗರದಲ್ಲಿ ಶುಕ್ರವಾರ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಇಲ್ಲಿನ £ವಾಸಿ ಚೆನ್ನಪ್ಪ ಮುಗೇರ ಎಂದು ಹೆಸರಿಸಲಾಗಿದೆ.
ಈ ಬಗ್ಗೆ ಮೃತರ ಪತ್ನಿ ಸುನಂದ (55) ಅವರು ಪೆÇಲೀಸರಿಗೆ ದೂರು £ೀಡಿದ್ದು, ಇವರ ಗಂಡ ಚೆನ್ನಪ್ಪ ಮುಗೇರ ಅವರು ಸುಮಾರು 2 ವರ್ಷಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಮನೆಯಲ್ಲಿಯೇ ಇದ್ದು, ಅವರಿಗೆ ಪೂಂಜಾಲಕಟ್ಟೆ ಹಾಗೂ ಬಂಟ್ವಾಳ ತಾಲೂಕು ಆಸ್ಪತ್ರೆಯಿಂದ ಶ್ವಾಸಕೊಶದ (ದಮ್ಮು ಕಟ್ಟುವ ) ಬಗ್ಗೆ ಚಿಕಿತ್ಸೆ ಪಡೆದುಕೊಂಡಿರುವುದಾಗಿದೆ. ಅದೇ ರೀತಿ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ದಮ್ಮು ಜಾಸ್ತಿಯಾಗಿದ್ದವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಸುಮಾರು ಬೆಳಿಗ್ಗೆ 11 ಗಂಟೆ ಸುಮಾರಿಗೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು £ೀಡಿದ ದೂರಿನ ಮೇರೆಗೆ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
0 comments:
Post a Comment