ಬಂಟ್ವಾಳ, ಜುಲೈ 11, 2025 (ಕರಾವಳಿ ಟೈಮ್ಸ್) : ಬಿ ಸಿ ರೋಡು ಫ್ಲೈ ಓವರ್ ಕೆಳಗೆ ಅಸ್ವಸ್ಥರಾಗಿ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿಯನ್ನು ವಸಂತ ಕುಮಾರ್ ಎಂದು ತಿಳಿದು ಬಂದಿದ್ದು, ಇತರ ವಿವರ ತಿಳಿದು ಬಂದಿಲ್ಲ. ಈ ಬಗ್ಗೆ ಬಿ ಮೂಡ ಗ್ರಾಮದ ಭಂಡಾರಿಬೆಟ್ಟು ನಿವಾಸಿ ಹರಿಪ್ರಸಾದ್ ಅವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದು, ಜುಲೈ 5 ರಂದು ಮಧ್ಯಾಹ್ನ 2.30 ಗಂಟೆಗೆ ಬಿ ಸಿ ರೋಡ್ ಪ್ಲೈ ಓವರ್ ಕೆಳಗೆ ಸುಮಾರು 45-48 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡು ಬಿದ್ದಿದ್ದು, ಆ ಸಮಯ ಯಾರೋ ಅಂಬ್ಯಲೆನ್ಸ್ ವಾಹನಕ್ಕೆ ಕರೆ ಮಾಡಿ ಬಂಟ್ವಾಳ ತಾಲೂಕು ಆಸ್ಪತ್ರೆಯ 108 ಅಂಬ್ಯುಲೆನ್ಸ್ ಮೂಲಕ ಬಿದ್ದಿದ್ದ ವ್ಯಕ್ತಿಯನ್ನು ಚಿಕಿತ್ಸೆಗೆ ಬಂಟ್ವಾಳ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಸದ್ರಿ ವ್ಯಕ್ತಿಯು ತೀವ್ರ ಅಸ್ವಸ್ಥಗೊಂಡಿದ್ದ ಕಾರಣ ಅದೇ ದಿನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿತ್ತು. ವ್ಯಕ್ತಿಯ ಹೆಸರು ವಸಂತ ಕುಮಾರ್ ಎಂಬುದು ತಿಳಿದು ಬಂದಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಸಂತಕುಮಾರ್ ಜುಲೈ 9 ರಂದು ಬೆಳಿಗ್ಗೆ 8.53 ಗಂಟೆಗೆ ಮೃತಪಟ್ಟಿದ್ದಾರೆ. ಈ ವ್ಯಕ್ತಿ ಅದ್ಯಾವುದೋ ಖಾಯಿಲೆಯಿಂದ ಬಳಲುತ್ತಿದ್ದವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೆÇಲೀಸ್‍ಯಲ್ಲಿ ಈ ಬಗ್ಗೆ ಯುಡಿಆರ್ ಪ್ರಕರಣ ದಾಖಲಾಗಿದೆ.
0 comments:
Post a Comment