ಮಂಗಳೂರು, ಜುಲೈ 27, 2025 (ಕರಾವಳಿ ಟೈಮ್ಸ್) : ಬಿಜೈ ಭಾರತಿ ಬಿಲ್ಡರ್ಸ್ ಕಛೇರಿಗೆ ಭೂಗತ ಪಾತಕಿ ರವಿ ಪೂಜಾರಿ ಸಹಚರರು ನಡೆಸಿದ ಶೂಟೌಟ್ ಘಟನೆಗೆ ಸಂಬಂದಿಸಿದಂತೆ ಉರ್ವಾ ಪೆÇಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ 23/2014 ಕಲಂ 447,120(ಬಿ) 307 ಐಪಿಸಿ ಹಾಗೂ 27 ಶಸ್ತ್ರಾಸ್ತ್ರ ಕಾಯ್ದೆಯಂತೆ ದಾಖಲಾಗಿದ್ದ ಪ್ರಕರಣದ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆಸಾಮಿಯನ್ನು ಉರ್ವ ಪೊಲೀಸರು ಭಾನುವಾರ ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ಎಂದು ಹೆಸರಿಸಲಾಗಿದೆ. ಈತ 2015 ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದು, ಈತನ ವಿರುದ್ದ ಮಂಗಳೂರು ಜೆಎಂಎಫ್‍ಸಿ 3ನೇ ನ್ಯಾಯಾಲಯ ವಾರಂಟ್ ಹೊರಡಿಸಿತ್ತು.
ಈತನನ್ನು ಮಹಾರಾಷ್ಟ್ರ ರಾಜ್ಯದ ಪಂಡರಾಪುರ ಎಂಬಲ್ಲಿಂದ ಮಂಗಳೂರು ಪೆÇಲೀಸ್ ಆಯುಕ್ತರ ಮಾರ್ಗದರ್ಶನದಂತೆ ಉರ್ವಾ ಪೆÇಲೀಸ್ ಠಾಣಾ ಇನ್ಸ್ ಪೆಕ್ಟರ್ ಅವರ ನೇತೃತ್ವದಲ್ಲಿ ಎ ಎಸ್ ಐ ವೇಣುಗೋಪಾಲ್, ಸಿಬ್ಬಂದಿಗಳಾದ ಪ್ರಮೋದ್, ನಾರಾಯಣ, ಗೋವಿಂದರಾಜ್ ಅವರ ತಂಡ ಭಾನುವಾರ ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈತ ಕಾವೂರು ಪೆÇಲೀಸು ಠಾಣಾ ಅಪರಾಧ ಕ್ರಮಾಂಕ 44/2014 ಕಲಂ: 448, 507, 120(ಬಿ) ಜೊತೆಗೆ 34 ಐಪಿಸಿ ಪ್ರಕರಣದಲ್ಲಿಯೂ ಆರೋಪಿಯಾಗಿದ್ದು, ನ್ಯಾಯಾಲಯವು ವಾರಂಟ್ ಹೊರಡಿಸಿದೆ. ಮತ್ತು ಈತನ ವಿರುದ್ದ ಮಹಾರಾಷ್ಟ್ರ ರಾಜ್ಯದ ಸತಾರ ಜಿಲ್ಲೆ ಕರಾಡ್ ಎಂಬಲ್ಲಿಯೂ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ಇರುತ್ತದೆ.
0 comments:
Post a Comment