ಉಪ್ಪಿನಂಗಡಿ, ಜುಲೈ 23, 2025 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 58/2021 ಕಲಂ 379 ಐಪಿಸಿ ಪ್ರಕರಣದ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ವಾರಂಟ್ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಯತಿರಾಜ್ (34) ಎಂದು ಹೆಸರಿಸಲಾಗಿದೆ. 2022 ರಿಂದ ಈತನಿಗೆ ಸುಮಾರು ಏಳು ಬಾರಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದ್ದರೂ ಇದುವರೆಗೂ ಕೋರ್ಟಿಗೆ ಹಾಜರಾಗದೆ ತಲೆಮರಿಸಿಕೊಂಡಿದ್ದ. ಇದೀಗ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಈತನನ್ನು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. ಈತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧಿತ ಯತಿರಾಜ್ ವಿರುದ್ದ ಪುತ್ತೂರು ನಗರ, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣ ದಾಖಲಾಗಿದ್ದು, ಕೊಣಾಜೆ, ಕಾವೂರು, ವಿಟ್ಲ ಠಾಣೆಗಳಲ್ಲಿ ಒಟ್ಟು ಸುಮಾರು 7 ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment