ಬಂಟ್ವಾಳ, ಜುಲೈ 24, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಯನ್ಸ್ ಕ್ಲಬ್ ಬಂಟ್ವಾಳ ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ-2025 ಕಾರ್ಯಕ್ರಮ ಬಿ ಸಿ ರೋಡಿನ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಭಾರತ ದೇಶ ಜನಸಂಖ್ಯೆಯಲ್ಲಿ ಪ್ರಥಮ ಸ್ಥಾನದಲ್ಲಿದ್ದು ಅರೋಗ್ಯವಂತ ಜೀವನ ನಡೆಸಲು ಚಿಕ್ಕ ಸಂಸಾರ ಸುಖಕ್ಕೆ ಆಧಾರ ಎಂದರು. ಯುವಕರು ಮತ್ತು ವಿದ್ಯಾರ್ಥಿಗಳು ಮುಂದಿನ ಸುಂದರ ಭಾರತ ನಿರ್ಮಿಸುವಲ್ಲಿ ತಾವುಗಳು ಜವಾಬ್ದಾರಿಯುತ ನೇರ ನಡೆಯಲ್ಲಿ ಸಾಗುವಂತಾಗಬೇಕು. ವಿಶೇಷವಾಗಿ ಮಹಿಳೆಯರು ತಮ್ಮ ಹೆಣ್ಣು ಮಕ್ಕಳ ಚಲನ ವಲನದ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಎಚ್ಚರಿಸಿದರು.
ಬಂಟ್ವಾಳ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷೆ ಜಯಂತಿ ವಿ ಪೂಜಾರಿ, ಆಡಳಿತ ವೈದ್ಯಾಧಿಕಾರಿ ಡಾ ಪುಷ್ಪಲತಾ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಶ್ರೀಮತಿ ಮಮ್ತಾಜ್ ಎಚ್ ಐ, ಬಂಟ್ವಾಳ ತಾ ಪಂ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಎಂ ರೋಹಿತಾಶ್ವ, ತಾಲೂಕು ಅರೋಗ್ಯಾಧಿಕಾರಿ ಡಾ ಅಶೋಕ್ ಕುಮಾರ್ ರೈ, ಸಂಪನ್ಮೂಲ ವ್ಯಕ್ತಿ ಡಾ ವಿಶ್ವೇಶ್ವರ ವಿ ಕೆ ಹಾಗೂ ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment