ಮಂಗಳೂರು, ಆಗಸ್ಟ್ 18, 2025 (ಕರಾವಳಿ ಟೈಮ್ಸ್) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ 1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಸಾಮಾನ್ಯ ಪದವಿ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 25ರವರೆಗೆ ಅವಧಿ ವಿಸ್ತರಿಸಲಾಗಿದೆ.
ಪ್ರವರ್ಗ-1, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ವಿದ್ಯಾರ್ಥಿಯ ಪೆÇೀಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂಪಾಯಿ, ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಯ ಪೆÇೀಷಕರ ವಾರ್ಷಿಕ ಆದಾಯ ಮಿತಿ 1 ಲಕ್ಷ ರೂಪಾಯಿ ಆಗಿದೆ.
ವೆಬ್ ಸೈಟ್ https://shp.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ www.bcwd.karnataka.gov.in/ ಪರಿಶೀಲಿಸಬಹುದು.
ಹೆಚ್ಚಿನ ಮಾಹಿತಿಗೆ ಅಥವಾ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.helpline@gmail.com ಇದಕ್ಕೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005) ಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment