ದೇರಳಕಟ್ಟೆ ಮುತ್ತೂಟ್ ಫೈನಾನ್ಸ್ ಕಳವುಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಿಸಿಬಿ ಪೊಲೀಸ್ ಬಲೆಗೆ - Karavali Times ದೇರಳಕಟ್ಟೆ ಮುತ್ತೂಟ್ ಫೈನಾನ್ಸ್ ಕಳವುಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಿಸಿಬಿ ಪೊಲೀಸ್ ಬಲೆಗೆ - Karavali Times

728x90

20 August 2025

ದೇರಳಕಟ್ಟೆ ಮುತ್ತೂಟ್ ಫೈನಾನ್ಸ್ ಕಳವುಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಿಸಿಬಿ ಪೊಲೀಸ್ ಬಲೆಗೆ

ಮಂಗಳೂರು, ಆಗಸ್ಟ್ 20, 2025 (ಕರಾವಳಿ ಟೈಮ್ಸ್) : ಮಂಗಳೂರು ನಗರದ ಕೊಣಾಜೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೆÇಲೀಸರು ಯಶಸ್ವಿಯಾಗಿದ್ದಾರೆ. 

ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ವೆಲ್ಲರಿಕುಂಡು ತಾಲೂಕಿನ ಬಳಲಿ ಅರಿಕಾರ-ಮಂಡಿಯಾನ್ ನಿವಾಸಿ ಕುಂಞÂ ಅಬ್ದುಲ್ಲಾ ಅವರ ಪುತ್ರ ಅಬ್ದುಲ್ ಲತೀಫ್ ಅಲಿಯಾಸ್ ಲತೀಫ್ (47) ಎಂದು ಹೆಸರಿಸಲಾಗಿದೆ. 

ಕಳೆದ ಮಾರ್ಚ್ 29 ರಂಧು ರಾತ್ರಿ ದೇರಳಕಟ್ಟೆ ಪರಿಸರದಲ್ಲಿರುವ ಎಚ್ ಎಂ ಕಾಂಪ್ಲೆಕ್ಸಿನಲ್ಲಿರುವ ಮುತ್ತೂಟ್ ಪೈನಾನ್ಸ್ ಕಚೇರಿಯ ಮುಂದಿನ ಬಾಗಿಲಿನ ಸೈರನ್ ಹೂಟರ್ ಕೇಬಲ್ ತುಂಡು ಮಾಡಿ ಪೈನಾನ್ಸ್ ಕಂಪೆನಿಯಲ್ಲಿ ಕಳವು ಮಾಡಲು ಪ್ರಯತ್ನ ಮಾಡಿದ ಬಗ್ಗೆ ಕೊಣಾಜೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಈ ಪ್ರಕರಣದಲ್ಲಿ ಈಗಾಗಲೇ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಞಂಗಾಡ್ ನಿವಾಸಿ ಅರ್ಷದ್ ಎಂಬವರನ್ನು ದಸ್ತಗಿರಿ ಮಾಡಲಾಗಿದೆ. ಪ್ರಕರಣದಲ್ಲಿ ಪತ್ತೆಯಾಗದೇ ತಲೆಮರೆಸಿಕೊಂಡಿದ್ದ ಹಾಗೂ ಈ ಹಿಂದೆ ನಡೆದ ರಾಜಧಾನಿ ಜುವೆಲ್ಲರಿ ಶಾಪ್ ಕಳ್ಳತನ ಹಾಗೂ ಕೇರಳ ರಾಜ್ಯದ ವಿಜಯ ಬ್ಯಾಂಕ್ ಕಳ್ಳತನದ ಮುಖ್ಯ ಸಂಚುಕೋರ ಅಬ್ದುಲ್ ಲತೀಫ್ ಅಲಿಯಾಸ್ ಲತೀಫ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿರುವ ಸಿಸಿಬಿ ಪೊಲೀಸರು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೆÇಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. 

ಬಂಧಿತ ಅಬ್ದುಲ್ ಲತೀಫ್ ಮೇಲೆ ಈ ಹಿಂದೆ ಕೇರಳ ರಾಜ್ಯದ ಹೊಸದುರ್ಗ ಪೆÇಲೀಸ್ ಠಾಣಾ ವ್ಯಾಪ್ತಿಯ ರಾಜಧಾನಿ ಜುವೆಲ್ಲರಿ ಶಾಪ್ ನಿಂದ ಸುಮಾರು 20 ಕೆಜಿಯಷ್ಟು ಬಂಗಾರವನ್ನು ಕಳ್ಳತನ ಮಾಡಿದ ಪ್ರಕರಣ ಮತ್ತು ಕೇರಳ ರಾಜ್ಯದ ಚಂದೇರ್ ಪೆÇಲೀಸ್ ಠಾಣಾ ವ್ಯಾಪ್ತಿಯ  ಚೆರವತ್ತೂರು ವಿಜಯ ಬ್ಯಾಂಕ್‍ನಲ್ಲಿ  ಸುಮಾರು 15.80 ಕೆಜಿಯಷ್ಟು ಬಂಗಾರ ಮತ್ತು 2.5 ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುತ್ತಾನೆ. ಈತನ ಬಂಧನ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ದೇರಳಕಟ್ಟೆ ಮುತ್ತೂಟ್ ಫೈನಾನ್ಸ್ ಕಳವುಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಿಸಿಬಿ ಪೊಲೀಸ್ ಬಲೆಗೆ Rating: 5 Reviewed By: karavali Times
Scroll to Top