ಬಂಟ್ವಾಳ, ಆಗಸ್ಟ್ 28, 2025 (ಕರಾವಳಿ ಟೈಮ್ಸ್) : ಫರಂಗಿಪೇಟೆ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಅನುಮತಿ ಪಡೆದು ಅಳವಡಿಸಲಾಗಿದ್ದ ಶುಭ ಕೋರುವ ಬ್ಯಾನರನ್ನು ವ್ಯಕ್ತಿಯೋರ್ವ ಹರಿದು ಹಾಕಿದ ಘಟನೆ ಬುಧವಾರ ರಾತ್ರಿ ವೇಳೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಫರಂಗಿಪೇಟೆ ನಿವಾಸಿ ಚಂದ್ರಶೇಖರ್ ಆಳ್ವ (55) ಅವರು ಪೊಲೀಸರಿಗೆ ದೂರು ನೀಡಿದ್ದು, ಪರಂಗಿಪೇಟೆ ಸೇವಾಂಜಲಿ ಭವನದಲ್ಲಿ ಆಗಸ್ಟ್ 24 ರಿಂದ 29ರವರೆಗೆ ನಡೆಯುವ ಗಣೇಶೋತ್ಸವ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರನ್ನು, ಅಗತ್ಯ ಇಲಾಖೆಯಿಂದ ಪೂರ್ವಾನುಮತಿ ಪಡೆದು ಆಗಸ್ಟ್ 25 ರಂದು ಮೂರೂವರೆ ಸಾವಿರ ರೂಪಾಯಿ ವೆಚ್ಚದಲ್ಲಿ ಪರಂಗಿಪೇಟೆಯ ಕುಂಪಣ ಮಜಲು ಕ್ರಾಸ್ ಬಳಿ ಬ್ಯಾನರ್ ಅಳವಡಿಸಿರುತ್ತಾರೆ. ಸದ್ರಿ ಬ್ಯಾನರನ್ನು ಆಗಸ್ಟ್ 27 ರಂದು ರಾತ್ರಿ ವೇಳೆ ಫರಂಗಿಪೇಟೆ ನಿವಾಸಿ ಹೈದರ್ ಎಂಬಾತ ಹರಿದು ಹಾಕಿ ನಷ್ಟವನ್ನುಂಟು ಮಾಡಿರುವುದಲ್ಲದೇ, ಧಾರ್ಮಿಕ ಭಾವನೆಗೆ ದಕ್ಕೆಪಡಿಸಿದ್ದಾನೆ. ಕೃತ್ಯದಿಂದಾಗಿ ಸಾರ್ವಜನಿಕರು ಪ್ರಚೋದನೆಗೊಂಡು ಗಲಭೆ ಏಳಬಹುದೆಂದು ತಿಳಿದಿದ್ದರೂ ಈತ ಉದ್ದೇಶಪೂರ್ವಕವಾಗಿ ಕೃತ್ಯ ನಡೆಸಿ ಸಾರ್ವಜನಿಕ ವಲಯದಲ್ಲಿ ಭೀತಿ ಉಂಟು ಮಾಡಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 129/2025 ಕಲಂ 299, 192, 353 (1), (ಬಿ), 57, 324(4) ಬಿ ಎನ್ ಎಸ್-2023 ಪ್ರಕಾರ ಪ್ರಕರಣ ದಾಖಲಾಗಿದೆ. ಆರೋಪಿ ಹೈದರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ಕೈಗೊಂಡಿದ್ದಾರೆ.
0 comments:
Post a Comment