ಬಂಟ್ವಾಳ, ಆಗಸ್ಟ್ 28, 2025 (ಕರಾವಳಿ ಟೈಮ್ಸ್) : ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಅಮ್ಟಾಡಿ ಗ್ರಾಮದ ಪೆದಮಲೆ ಎಂಬಲ್ಲಿ ಬಂಟ್ವಾಳ-ಸಿದ್ದಕಟ್ಟೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಬದಿಯಲ್ಲಿ ಮಣ್ಣು ಕುಸಿದಿದೆ. ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ ಪಿಡಬ್ಲ್ಯೂಡಿ ಇಲಾಖಾಧಿಕಾರಿಗಳು ತಾತ್ಕಾಲಿಕ ಕ್ರಮ ಕೈಗೊಂಡಿದ್ದಾರೆ. ಮೂಡುನಡುಗೋಡು ಗ್ರಾಮದ ದಂಡೆ ಮಜಲು ನಿವಾಸಿ ರಾಮಣ್ಣ ನಾಯಕ್ ಬಿನ್ ನಾರಣಪ್ಪ ನಾಯಕ್ ಅವರ ಕಚ್ಚಾ ಮನೆಗೆ ತೀವ್ರ ಹಾನಿಯಾಗಿದೆ. ಮನೆ ಮಂದಿಯನ್ನು ಸಮೀಪದ ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿದೆ.
28 August 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment