ಬಂಟ್ವಾಳ, ಆಗಸ್ಟ್ 01, 2025 (ಕರಾವಳಿ ಟೈಮ್ಸ್) : ಎಸ್ಕೆಎಸ್ಸೆಸ್ಸೆಫ್ ಗುಡ್ಡೆಅಂಗಡಿ ಹಾಗೂ ಆಲಡ್ಕ ಶಾಖೆಗಳ ಜಂಟಿ ಆಶ್ರಯದಲ್ಲಿ ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನಿಗಳ ಬಳಗ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಮತ್ತು ಮಂಗಳೂರು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಇದರ ಸಹಯೋಗದಲ್ಲಿ ಸಮಸ್ತ 100ನೇ ವಾರ್ಷಿಕೋತ್ಸವದ ಪ್ರಚಾರ ಪ್ರಯುಕ್ತ ಮರ್ಹೂಂ ಕೊಳತ್ತಮಜಲು ಅಬ್ದುಲ್ ರಹಿಮಾನ್ ಅವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ ಹಾಗೂ ಮಂಗಳೂರು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ), ಡಾ ಪಿ ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ) ಸೆಂಚುರಿ ಗ್ರೂಪ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಆಗಸ್ಟ್ 3 ರಂದು ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪಾಣೆಮಂಗಳೂರು-ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಮದ್ರಸ ಸಭಾಂಗಣದಲ್ಲಿ ನಡೆಯಲಿದೆ.
ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ, ಬಿಪಿ, ಶುಗರ್ ತಪಾಸಣೆ, ಅಗತ್ಯ ಇರುವವರಿಗೆ ಉಚಿತ ಕಣ್ಣಿನ ಪೆÇರೆ ಶಸ್ತ್ರ ಚಿಕಿತ್ಸೆ, ಉಚಿತ ಕಣ್ಣಿನ ಪೆÇರೆ ಶಸ್ತ್ರ ಚಿಕಿತ್ಸೆ ಆಯ್ಕೆಯಾದವರಿಗೆ ಗೊತ್ತುಪಡಿಸಿದ ದಿನಾಂಕದಂದು ಮಂಗಳೂರಿನ ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆಗೆ ವಾಹನದಲ್ಲಿ ಕರೆದುಕೊಂಡು ಹೋಗಿ ಶಸ್ತ್ರ ಚಿಕಿತ್ಸೆ ಬಳಿಕ ವಾಪಾಸು ಕರೆ ತರಲಾಗುವುದು. ಈ ಬಗ್ಗೆ ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ 7259756376 ಹಾಗೂ 9880645739 ಗಳನ್ನು ಸಂಪರ್ಕಿಸಬಹುದು ಎಂದು ಎಸ್ಕೆಎಸ್ಸೆಸ್ಸೆಫ್ ಪ್ರಕಟಣೆ ತಿಳಿಸಿದೆ.
0 comments:
Post a Comment