ಮಂಗಳೂರು, ಆಗಸ್ಟ್ 28, 2025 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಯಾವುದೇ ಜಾತಿ/ ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ/ ಸೂಚನೆ, ಮನವಿಗಳನ್ನು ನೀಡಲು ಸೆಪ್ಟೆಂಬರ್ 1ರವರೆಗೆ ಅವಧಿ ವಿಸ್ತರಿಸಲಾಗಿದೆ.
ಸಂಗ್ರಹಿಸಲಾದ ಜಾತಿ/ ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುತ್ತದೆ. ಸಾರ್ವಜನಿಕರು ತಮ್ಮ ಸಲಹೆ/ ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ. 16, ಡಿ. ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ, ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
0 comments:
Post a Comment