ಬೆಳ್ತಂಗಡಿ, ಆಗಸ್ಟ್ 13, 2025 (ಕರಾವಳಿ ಟೈಮ್ಸ್) : ನಕಲಿ ನಂಬರ್ ಪ್ಲೇಟ್ ಅಳವಡಿಸಿ ಇನ್ನೋವಾ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುವ ವೇಳೆ ಅತೀ ವೇಗದ ಚಾಲನೆ ಮಾಡಿ ಅಟೋ ರಿಕ್ಷಾ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದದ್ದಲ್ಲದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಗುರುವಾಯನಕೆರೆ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಕಾರಿನಲ್ಲಿದ್ದ ಮೂವರು ಆರೋಪಿಗಳ ಪೈಕಿ ಇಬ್ಬರು ಪರಾರಿಯಾಗಿದ್ದು, ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮೂಡಬಿದ್ರೆ ಸುವರ್ಣ ನಗರ ನಿವಾಸಿ ಆರಿಫ್ (26) ಎಂದು ಹೆಸರಿಸಲಾಗಿದ್ದು, ಪರಾರಿಯಾದವರನ್ನು ಅದೇ ಪರಿಸರದ ನಿವಾಸಿಗಳಾದ ರಝ್ವಾನ್ (30) ಹಾಗೂ ಸಾಯಿಲ್ (22) ಎಂದು ಗುರುತಿಸಲಾಗಿದೆ.
ಬುಧವಾರ ಬೆಳಿಗ್ಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿದ್ದ ಕೆಎ19 ಎಂಪಿ2084 ನೋಂದಣಿ ಸಂಖ್ಯೆಯ ಇನ್ನೋವಾ ಕಾರಿನಲ್ಲಿ, ಚಿಕ್ಕಮಗಳೂರಿನ ಮುಡಗೇರಿ ಎಂಬಲ್ಲಿಂದ ಮೂರು ದನಗಳನ್ನು ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ತುಂಬಿಸಿಕೊಂಡು, ಅತೀ ವೇಗದಲ್ಲಿ ಹಾಗೂ ದುಡುಕುತನದಲ್ಲಿ ಚಲಾಯಿಸಿಕೊಂಡು ಚಾರ್ಮಾಡಿ ಮೂಲಕ ಮಂಗಳೂರು ಕಡೆಗೆ ಬಂದಿದ್ದು, ಈ ಬಗ್ಗೆ ಮಾಹಿತಿ ಪಡೆದ ಬೆಳ್ತಂಗಡಿ ಠಾಣಾ ಪೆÇಲೀಸರು ಗುರುವಾಯನಕೆರೆ ಎಂಬಲ್ಲಿ ಕಾರನ್ನು ನಿಲ್ಲಿಸಲು ಸೂಚಿಸಿದ್ದಾರೆ. ಆದರೆ ಕಾರು ನಿಲ್ಲಿಸದೇ ಪರಾರಿಯಾಗುವ ಪ್ರಯತ್ನದಲ್ಲಿ ಅಟೋರಿಕ್ಷಾ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತಿದೆ. ಈ ವೇಳೆ ಪೆÇೀಲಿಸರನ್ನು ದೂಡಿಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ವಾಹನದಲ್ಲಿದ್ದ ಮೂವರು ಆರೋಪಿಗಳ ಪೈಕಿ ಇಬ್ಬರು ಪರಾರಿಯಾಗಿದ್ದು, ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿರುತ್ತಾರೆ. ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಕಂಡುಬಂದಿದೆ, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment