ಬಂಟ್ವಾಳ, ಆಗಸ್ಟ್ 20, 2025 (ಕರಾವಳಿ ಟೈಮ್ಸ್) : ಯುವ ಕಾಂಗ್ರೆಸ್ ಸಮಿತಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಮತ್ತು ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಪರಿಶಿಷ್ಟ ಜಾತಿಗಳ ಘಟಕಗಳ ಆಶ್ರಯದಲ್ಲಿ ಇತ್ತೀಚೆಗೆ ನಿಧನರಾದ ಬಂಟ್ವಾಳ ಪುರಸಭಾ ಸದಸ್ಯ, ಆದಿದ್ರಾವಿಡ ಸಮಾಜದ ಗಟ್ಟಿ ಧ್ವನಿ, ಕಾಂಗ್ರೆಸ್ ಪಕ್ಷದ ಹಿರಿಯ ದಲಿತ ಮುಖಂಡ ಜನಾರ್ದನ ಚೆಂಡ್ತಿಮಾರ್ ಅವರ ಸ್ಮರಣಾರ್ಥ ರಕ್ತದಾನ ಶಿಬಿರವು ಆಗಸ್ಟ್ 24 ರಂದು ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಿ ಸಿ ರೋಡಿನ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
20 August 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment