ಬಂಟ್ವಾಳ, ಆಗಸ್ಟ್ 08, 2025 (ಕರಾವಳಿ ಟೈಮ್ಸ್) : ತಾಲೂಕಿನ ಸಂಗಬೆಟ್ಟು ಗ್ರಾಮದ ಗಾಡಿಪಲ್ಕೆ ಎಂಬಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ.
ಇಲ್ಲಿನ ನಿವಾಸಿ ರುಕ್ಮಯ್ಯ ಪೂಜಾರಿ ಅವರ ವಿನಾಯಕ ಜನರಲ್ ಸ್ಟೋರ್ ಎಂಬಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 650 ರೂಪಾಯಿ ಮೌಲ್ಯದ 1.170 ಲೀಟರ್ ಮಧ್ಯ ಇರುವ ಒಟ್ಟು 13 ಸ್ಲಾಚೆಟ್ ಗಳನ್ನು ದಾಸ್ತಾನು ಇರುವುದು ಪತ್ತೆಯಾಗಿದೆ.
ಸದಾಶಿವ ಎಂಬವರ ದಿನಸಿ ಅಂಗಡಿಯಲ್ಲಿ ಅಕ್ರಮ ಮಧ್ಯ ಮಾರಾಟ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಸುಮಾರು 700 ರೂಪಾಯಿ ಮೌಲ್ಯದ 1.560 ಲೀಟರ್ ಮದ್ಯ ಇರುವ ಒಟ್ಟು 14 ಸ್ಲಾಚೆಟ್ ಗಳು ದಾಸ್ತಾನು ಇರುವುದು ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment