ಪುತ್ತೂರು, ಆಗಸ್ಟ್ 06, 2025 (ಕರಾವಳಿ ಟೈಮ್ಸ್) : ಪುತ್ತೂರು ಕಸಬಾ ಗ್ರಾಮದ ಬೊಳುವಾರು ಎಂಬಲ್ಲಿ ಜುಲೈ 14 ರಂದು ವ್ಯಕ್ತಿಯೋರ್ವ ತಲವಾರು ಹಿಡಿದುಕೊಂಡು ಸಾರ್ವಜನಿಕವಾಗಿ ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲ ತಾಣದಲ್ಲಿ ವೈಮನಸ್ಸು ಉಂಟು ಮಾಡುವ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
“ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ, ಆರೋಪಿ, ಪುತ್ತೂರು ವಿಧಾನಸಭಾ ಕ್ಷೇತ್ರ ಎಸ್ ಡಿ ಪಿ ಐ ಅಧ್ಯಕ್ಷ ಅಶ್ರಪ್ ಬಾವು ಎಂಬಾತ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ತಲವಾರು ಘಟನೆಯ ಬಗ್ಗೆ ನೈಜತೆಯನ್ನು ಪರಿಶೀಲಿಸದೇ ಸಮಾಜದಲ್ಲಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಹಾಗೂ ದ್ವೇಷ ಉಂಟಾಗುವ ರೀತಿಯಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿರುವ ಬಗ್ಗೆ ಆಗಸ್ಟ್ 5 ರಂದು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 68/2025 ಕಲಂ 240, 353(2) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದೆ.
0 comments:
Post a Comment